ಕನ್ನಡದಲ್ಲಿಯೂ CRPF ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ: ಸಿದ್ದರಾಮಯ್ಯ ಆಗ್ರಹ
Karnataka Election 2023: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರು: ಕನ್ನಡದಲ್ಲಿಯೂ CRPF ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. #ಭಾಷಾತಾರತಮ್ಯ ಹ್ಯಾಶ್‍ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿದ್ದಾರೆ.
‘ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
"ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ"
‘ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ’ವೆಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ! ಹೇಗಿರಲಿದೆ ವೋಟಿಂಗ್ ಪ್ರಕ್ರಿಯೆ ?
ಬಸವರಾಜ್ ಬೊಮ್ಮಾಯಿಯವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.