ದಾವಣಗೆರೆ : ರಾಜ್ಯದಲ್ಲಿ ಮೋದಿ ಮತ್ತು ಅಮಿತ್ ಶಾ ಆಶೀರ್ವಾದ ದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ.140 ಕ್ಕು ಸೀಟ್ ಗಳನ್ನ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ದಾವಣಗೇರಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ : 72 ಲಕ್ಷ ರೂ ಕದ್ದ ಆರೋಪದ ಮೇಲೆ ಸೋನು ನಿಗಮ್ ತಂದೆಯ ಮಾಜಿ ಚಾಲಕನ ವಿರುದ್ಧ ಪ್ರಕರಣ
ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ.ಯಾರಾರೋ ನಾನೇ ಸಿಎಂ ನಾನೇ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ.ಮುಖ್ಯಮಂತ್ರಿ ಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ.ಆ ಕನಸು ನನಸಾಗುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ :"ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ"
ಇದೆ ವೇಳೆ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು ಇದು ದೇಶದಲ್ಲಿಯೇ ಬೇರೆ ರಾಜ್ಯದಲ್ಲಿ ಮಾಡದ ರೀತಿ ಮೀಸಲಾತಿ ಘೋಷಣೆಯಾಗಿದೆ.ಹಿಂದುಳಿದ, ಅಲ್ಪಸಂಖ್ಯಾತರು ಒಪ್ಪುವಂತ ನಿರ್ಧಾರ ಮಾಡಲಾಗಿದೆ.ಎಲ್ಲ ಸಮುದಾಯದವರು ಈ ಬಗ್ಗೆ ಹೆಮ್ಮೆ ಪಡುತ್ತಿದ್ದಾರೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.