Karnataka New Chief Minister: ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದರೊಂದಿಗೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಈಗ ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಈ ಪ್ರಶ್ನೆ ಕೇಳಲಾಗಿತ್ತು. ಆದರೆ, ಆಗ ಕಾಂಗ್ರೆಸ್ ಫಲಿತಾಂಶದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿತ್ತು. ಇದೀಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಪರಮೇಶ್ವರ್ ಹೆಸರುಗಳು ಸಿಎಂ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ - ಬಸವರಾಜ ಬೊಮ್ಮಾಯಿ‌


ಕರ್ನಾಟಕದಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ 113 ದಾಟಿದ ತಕ್ಷಣ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಒಂದೇ ಒಂದು ಪ್ರಶ್ನೆ ಎಲ್ಲರಲ್ಲೂ ಮನೆಮಾಡಿತ್ತು. ಈ ಪ್ರಶ್ನೆಗೆ ಕಾಂಗ್ರೆಸ್ ನಿಂದ ಉತ್ತರ ಬಂದಿಲ್ಲ. ಆದರೆ ಸಿಎಂ ಸ್ಥಾನಕ್ಕೆ ಏರುವ ಮುನ್ನ ಕಾಂಗ್ರೆಸ್ ಒಂದು ಸೂತ್ರವನ್ನು ಸಿದ್ಧಪಡಿಸಿದೆ. ಅದರ ಆಧಾರದ ಮೇಲೆ ಕರ್ನಾಟಕದಲ್ಲಿ ಪ್ರತಿ ವರ್ಗಕ್ಕೂ ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ.


ಮೂಲಗಳ ಪ್ರಕಾರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಜೊತೆಗೆ ಕಾಂಗ್ರೆಸ್ ಕೂಡ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಲಿದೆ. ಮೂವರೂ ಉಪಮುಖ್ಯಮಂತ್ರಿಗಳು ಮೂರು ಸಮುದಾಯದವರಾಗಲಿದ್ದಾರೆ. ಲಿಂಗಾಯತ, ಒಕ್ಕಲಿಗ ಹಾಗೂ ದಲಿತ ಶಾಸಕರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಈ ಸೂತ್ರದ ಹಿಂದಿನ ಕಾರಣ 2024 ರ ಲೋಕಸಭೆ ಚುನಾವಣೆ.


ಕರ್ನಾಟಕದಲ್ಲಿ ಯಾರಾಗಬಹುದು ಸಿಎಂ?


2018ರಲ್ಲಿ ಅಂದರೆ ಸರಿಯಾಗಿ ನಾಲ್ಕೂವರೆ ವರ್ಷಗಳ ಹಿಂದೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಕಾಂಗ್ರೆಸ್‌ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದರಿಂದ ಪಕ್ಷವು ಇದನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಬೇಕಿದೆ. ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಾಂಗ್ರೆಸ್ ಯಾರನ್ನೇ ಕೂರಿಸಲಿ, ಕಾಂಗ್ರೆಸ್ ನ ಐದು ಭರವಸೆಗಳನ್ನು ಸಾರ್ವಜನಿಕರಿಗೆ ಕೊಂಡೊಯ್ಯುವ ಜವಾಬ್ದಾರಿ ಅವರ ಮೇಲಿರುತ್ತದೆ. ಆ ಗ್ಯಾರಂಟಿಯನ್ನು ಆದಷ್ಟು ಬೇಗ ಜಾರಿ ಮಾಡಿದರೆ,  ಮುಂಬರುವ ಚುನಾವಣೆಯಲ್ಲಿ ಇದರ ಲಾಭ ಪಡೆಯಬಹುದು. ಹೀಗಿರುವಾಗ ಎಲ್ಲ ರಾಜಕೀಯ ಸಮೀಕರಣಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯನ್ನು ಕಾಂಗ್ರೆಸ್ ಆಯ್ಕೆ ಮಾಡಬೇಕಿದೆ.


ಕರ್ನಾಟಕದ ಸಿಎಂ ರೇಸ್ ನಲ್ಲಿ ಯಾರು ಮುಂದಿದ್ದಾರೆ ಗೊತ್ತಾ?


ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರು ದೊಡ್ಡ ಆಕಾಂಕ್ಷಿಗಳಿದ್ದಾರೆ. ಮೊದಲನೆಯವರು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎರಡನೇಯವರು ಕರ್ನಾಟಕ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್. 2013 ರಲ್ಲಿ ಸಿಎಂ ಸ್ಥಾನದ ರೇಸ್‌ ನಲ್ಲಿ ಸಿದ್ದರಾಮಯ್ಯ ಅವರು ಹಾಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ್ದರು. ರಾಜ್ಯದಲ್ಲಿ 5 ವರ್ಷಗಳ ಕಾಲ ಕಾಂಗ್ರೆಸ್ ಸರಕಾರವಿತ್ತು, ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರಿಗೆ ಸರ್ಕಾರ ನಡೆಸಿದ ಅನುಭವವಿದೆ. ಇದರೊಂದಿಗೆ ಸಿದ್ದರಾಮಯ್ಯ ಕೂಡ ಇಡೀ ಕರ್ನಾಟಕದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ವಯಸ್ಸು ದೊಡ್ಡ ಸಮಸ್ಯೆಯಾಗಿದೆ. ಸಿದ್ದರಾಮಯ್ಯ ಅವರಿಗೆ 75 ವರ್ಷ ವಯಸ್ಸಾಗಿದ್ದು, ಅವರು ಕಾಂಗ್ರೆಸ್‌ ನ ದೂರಗಾಮಿ ರಾಜಕಾರಣಕ್ಕೆ ಯೋಗ್ಯರಲ್ಲ ಎಂಬುದು ಕೆಲವರ ಮಾತು.


ಡಿಕೆ ಶಿವಕುಮಾರ್ ಪಟ್ಟ ಎಷ್ಟು ಖಚಿತ?


ಕರ್ನಾಟಕದಲ್ಲಿ ಸಿಎಂ ಹುದ್ದೆಯ ರೇಸ್‌ ನಲ್ಲಿರುವ ಇನ್ನೊಂದು ಮುಖ ಡಿಕೆ ಶಿವಕುಮಾರ್. ಸತತ ಐದು ವರ್ಷಗಳಿಂದ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾಗಿ ಬಿಜೆಪಿಯನ್ನು ದಿಟ್ಟವಾಗಿ ಎದುರಿಸಿದ ನಾಯಕ ಡಿಕೆಶಿ. ಆದರೆ ಸಿದ್ದರಾಮಯ್ಯನವರಷ್ಟು ಪ್ರಭಾವ ಇಡೀ ಕರ್ನಾಟಕದಲ್ಲಿ ಇಲ್ಲದಿರುವುದು ಡಿಕೆಶಿಗೆ ದೊಡ್ಡ ಸಮಸ್ಯೆಯಾಗಿದೆ. ಆದರೆ, ಜೆಡಿಎಸ್ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಡಿಕೆ ಶಿವಕುಮಾರ್ ತೊಡೆ ತಟ್ಟಿ ನಿಂತಿದ್ದಾರೆ. ಈ ಬಾರಿ ಮೈಸೂರಿನಲ್ಲಿ ಕಾಂಗ್ರೆಸ್ ದೊಡ್ಡ ಗೆಲುವು ದಾಖಲಿಸಿದೆ.


ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಹೇಗೆ?


ಕರ್ನಾಟಕದ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ, ಮುಂದಿನ ಸಿಎಂ ಯಾರು ಎಂದು ಪ್ರಶ್ನೆ ಕೇಳಿದಾಗ, ಅವರು ಪಕ್ಷದ ನಿಯಮಗಳನ್ನು ವಿವರಿಸಿಕೊಂಡು ಅಲ್ಲಿಂದ ತಪ್ಪಿಸಿಕೊಂಡರು. ಆದರೆ ಕಾಂಗ್ರೆಸ್ ಅಧ್ಯಕ್ಷರ ಮನಸ್ಸಿನಲ್ಲಿಯೂ ಕರ್ನಾಟಕದ ಸಿಎಂ ಆಗುವ ಆಕಾಂಕ್ಷೆ ಕೊನೆಗೊಂಡಿಲ್ಲ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಮೂರು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ಖರ್ಗೆಯವರು ಸ್ವಲ್ಪದರಲ್ಲೇ ಮಿಸ್ ಮಾಡಿಕೊಂಡಿದ್ದರು. ಈ ಬಾರಿ ಕಾಂಗ್ರೆಸ್‌ ನ ಅಧಿಕಾರ ಅವರ ಕೈಯಲ್ಲಿದೆ. ಖರ್ಗೆ ಕ್ಷೇತ್ರದಲ್ಲೂ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಿದೆ. ಹೀಗಿರುವಾಗ ಕುರ್ಚಿ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಹಗ್ಗ ಜಗ್ಗಾಟ ಇನ್ನಷ್ಟು ಜೋರಾದರೆ ಖರ್ಗೆ ಕೂಡ ಕಾಂಗ್ರೆಸ್ ಗೆ ಆಯ್ಕೆಯಾಗಬಹುದು.


ಈ ಮೂವರು ನಾಯಕರ ಹೊರತಾಗಿ ಸಿಎಂ ಸ್ಥಾನದ ಹಂಬಲದಲ್ಲಿರುವ ಹಲವು ನಾಯಕರು ಕಾಂಗ್ರೆಸ್ ನಲ್ಲಿದ್ದಾರೆ. ಈ ನಾಯಕರ ಪಟ್ಟಿಯಲ್ಲಿ ಅತ್ಯಂತ ಶಕ್ತಿಶಾಲಿ ಹೆಸರು ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರದ್ದು. ಜಿ ಪರಮೇಶ್ವರ್ ದಲಿತ ಸಮುದಾಯದಿಂದ ಬಂದಿದ್ದು ಅವರ ಪ್ರೊಫೈಲ್ ಸ್ಟ್ರಾಂಗ್ ಆಗಿದೆ.


ಆದರೆ, ಇದು ತಮ್ಮ ಕೊನೆಯ ಚುನಾವಣೆ ಎಂದು ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯ ಘೋಷಿಸಿದ್ದರು. ಹೀಗಿರುವಾಗ ಒಂದಷ್ಟು ಕಾಲ ಸಿಎಂ ಸ್ಥಾನ ನೀಡಿ ಎರಡೂವರೆ ವರ್ಷಗಳ ಸೂತ್ರದಡಿಯಲ್ಲಿ ಮೊದಲು ಸಿದ್ದರಾಮಯ್ಯ, ಆಮೇಲೆ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡುವ ಮೂಲಕ ಕಾಂಗ್ರೆಸ್ ಅವರಿಗೆ ಗೌರವಯುತ ಬೀಳ್ಕೊಡುಗೆ ನೀಡಬಹುದೇನೋ ಎಂಬ ಕುತೂಹಲ ಮನೆ ಮಾಡಿದೆ. ಆದರೆ ಡಿಕೆ ಶಿವಕುಮಾರ್ ಕೂಡ ಇದನ್ನು ಒಪ್ಪುತ್ತಾರಾ ಎಂಬುದು ಇಲ್ಲಿ ಪ್ರಮುಖ ಪ್ರಶ್ನೆಯಾಗಿದೆ.


ಮೂಲಗಳ ಪ್ರಕಾರ ಇಂದು ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಬಹುದು.


ಇವೆಲ್ಲದರ ಮಧ್ಯೆ, ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡಲು ಕಾಂಗ್ರೆಸ್ ಎಲ್ಲಾ ಪ್ಲಾನ್ ನಡೆಸಿಕೊಂಡಿದೆಯಂತೆ.  ಈಗಾಗಲೇ ಈ ಪ್ಲಾನ್ ಬಗ್ಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಟೀಂ ನಿಂದ ಸಿಎಂ ಹೆಸರಿಗೆ ಅಸ್ತು ಸಿಕ್ಕಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ವೈಯಕ್ತಿಕ ವರ್ಚಸ್ಸಿಗೆ ಸಾಕ್ಷಿಯಾದ ಬೆಳಗಾವಿ ಜಿಲ್ಲೆಯ ಫೈನಲ್ ರಿಸಲ್ಟ್ ಇಲ್ಲಿದೆ


ಪೂರ್ಣಾವಧಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರನ್ನು ಕೈ ನಾಯಕರು ಫೈನಲ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ಈಗಾಗಲೇ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ ತಯಾರಿ ಪ್ರಾರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರೆಯಲಿದ್ದಾರಂತೆ. ಇನ್ನೊಂದೆಡೆ ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ