ಬೆಂಗಳೂರು: ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ.


‘ಮುಸ್ಲಿಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಪರಿಗಣಿಸಿತ್ತು ಎಂಬ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು.


ಇದನ್ನೂ ಓದಿ: "ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ"


ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ ಅತ್ಯವಸರದಿಂದ ಮುಸ್ಲಿಂ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ.


ಬಂಡೀಪುರದಲ್ಲಿ ಪ್ರಧಾನಿ ಮೋದಿಗೆ ಕಾಣಿಸದ ಹುಲಿ: ಸಫಾರಿ ಜೀಪ್ ಚಾಲಕನ ವಿರುದ್ಧ ಕ್ರಮ?


ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಆಯೋಗ ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ.


ಕೇಂದ್ರ ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಅವರು ಆಗ್ರಹಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.