`ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ`
Vinay Kulkarni : ಧಾರವಾಡ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ. ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಧಾರವಾಡ ಭೇಟಿಗೆ ನಿರ್ಭಂದಿಸಿದೆ.
Karnataka Assembly Election 2023 : ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಅನುಮತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಅನುಮತಿಯನ್ನು ನಿರಾಕರಿಸಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಇದನ್ನೂ ಓದಿ-BSY Lucky Car: ಪುತ್ರನ ಗೆಲುವಿಗೆ BSY ಬಳಸಿದ ಕಾರಿನ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ
ವಿನಯ್ ಕುಲಕರ್ಣಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ 50 ದಿನ ಧಾರವಾಡಕ್ಕೆ ಬೇಟಿ ನೀಡಲು ಸುಪ್ರೀಂ ಕೋರ್ಟ್‌ಗೆ ಅನುಮತಿಯನ್ನು ಯಾಚಿಸಿದ್ದರು. ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು. ನ್ಯಾಯಮೂರ್ತಿಗಳು ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ಇಲ್ಲ. ಸುಪ್ರೀಂಕೋರ್ಟ್ ಸಹ ಜಾಮೀನು ಷರತ್ತು ಸಡಿಸಿಲಿಲ್ಲ. ಆದರೂ ಏಕೆ ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಿದೆ? ಎಂದು ವಕೀಲರನ್ನು ಪ್ರಶ್ನೆ ಮಾಡಿತು.
ಇದನ್ನೂ ಓದಿ-Amit Shah Road Show: ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ ಹೇಗಿತ್ತು ನೋಡಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.