ಶಿವಮೊಗ್ಗ: ರಾಜ್ಯದೆಲ್ಲೇಡೆ ಚುನಾವಣೆ ಅಖಾಡ ಜೋರಾಗಿದೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ರಾಜ್ಯಾದ್ಯಂತ ಚುನಾವಣೆ ಪ್ರಚಾರ, ಸಮಾವೇಶ ಬಾರಿ ಸದ್ದು ಮಾಡುತ್ತಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕನ್ನಡ ನಾಡ ಗೀತೆ ಹಾಕುವ ಬದಲು ತಮಿಳು ನಾಡಗೀತೆ ಪ್ರಸಾರ ಮಾಡಿದ್ದಾರೆ.
ಕುವೆಂಪು ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ತವರೂರಾದ ಶಿವಮೊಗ್ಗದಲ್ಲಿ ಕೆ. ಎಸ್. ಈಶ್ವರಪ್ಪ ಸಮ್ಮುಖದಲ್ಲಿ ಈ ಆಚಾತುರ್ಯ ನಡಿದಿದೆ. ತಮಿಳು ಸಮುದಾಯದ ಮತ ಸೆಳೆಯುವ ಭರದಲ್ಲಿ ಕನ್ನಡ ಗೀತೆಗೆ ಅವಮಾನ ಮಾಡಲಾಗಿದೆ.
ಇದನ್ನೂ ಓದಿ:Karnataka Election 2023: ಯತ್ನಾಳರ ‘ವಿಷಕನ್ಯೆ’ ಹೇಳಿಕೆಗೆ ಪ್ರಧಾನಿ ಮೋದಿ ಒಪ್ಪಿಗೆ ಇರಬಹುದೇನೋ? ಕಾಂಗ್ರೆಸ್
ನಾಡಗೀತೆ ಪ್ರಸಾರವಾಗುತ್ತಿದ್ದಂತೆ ವೇದಿಕೆ ಮೇಲಿನ ಎಲ್ಲ ಗಣ್ಯರು ಎದ್ದು ನಿಂತು ತಮಿಳು ನಾಡಗೀತೆಗೆ ಗೌರವ ಸಲ್ಲಿಸಿದ್ದಾರೆ. ಬಳಿಕ ನಾಡಗೀತೆ ಪ್ರಸಾರವಾಗುತ್ತಿದ್ದಂತೆ ವೇದಿಕೆ ಮೇಲಿನ ಎಲ್ಲ ಗಣ್ಯರು ಎದ್ದು ನಿಂತು ತಮಿಳು ನಾಡಗೀತೆಗೆ ಗೌರವ ಸಲ್ಲಿಸಿದ್ದಾರೆ ನಿಲ್ಲಿಸಿ ಕನ್ನಡ ನಾಡ ಗೀತೆ ಪ್ರಸರಾ ಮಾಡಲು ಸೂಚಿಸಿದ್ದಾರೆ.
ಇದನ್ನೂ ಓದಿ: ಮೇ.10 ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ
ಕನ್ನಡ ಹಾಗೂ ಕುವೆಂಪು ಗೀತೆಗೆ ಅವಮಾನ ಹಿನ್ನಲೆ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಟೀಕೆ ಹಾಗೂ ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭಾಗಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.