ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದ ಚುನಾವಣಾ ಆಯೋಗ
ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ.
ಇದನ್ನೂ ಓದಿ: IPL 2023 ಪ್ರಾರಂಭಕ್ಕೂ ಮುನ್ನ ಚೆನ್ನೈ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್: ಧೋನಿ ಸಹ-ಆಟಗಾರ ಆಡೋದು ಡೌಟ್
ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು ಅನುಕೂಲವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: CSK: ಮತ್ತೆ ಮೋಡಿ ಮಾಡುತ್ತಾ ಧೋನಿ ಮ್ಯಾಜಿಕ್! ಚೆನ್ನೈಗೆ ಇದು ಸಹಕರಿಸಿದ್ರೆ, ಅದು ಮುಳುವಾಗುತ್ತೆ! ಏನದು ಗೊತ್ತಾ?
ಆನ್ ಲೈನ್ ವೋಟಿಂಗ್ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು.ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿತ್ತು.
ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದ್ದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್ ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿಕೊಂಡಿತ್ತು.ಪತ್ರಕರ್ತರ ಬೇಡಿಕೆ ಪರಿಗಣಿಸಿ ಪೋಸ್ಟಲ್ ವೋಟಿಂಗ್ ಅವಕಾಶ ಮಾಡಿಕೊಟ್ಟಿರುವ ಚುನಾವಣಾ ಆಯೋಗಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.