ಬೆಂಗಳೂರು: ಕನ್ನಡದ ಕತ್ತು ಹಿಚುಕಿ ಹಿಂದಿ ಹೇರುವ ನಿಮ್ಮ ಕಟುಕತನ, ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ವಾರೆ ವ್ಹಾ ಅಮಿತ್ ಜೀ, ಇದು ಕರ್ನಾಟಕದ ಭವಿಷ್ಯವನ್ನು ನರೇಂದ್ರ ಮೋದಿ ಅವರ ಕೈಯಲ್ಲಿ ಕೊಡುವ ಚುನಾವಣೆ ಎಂಬ ಸತ್ಯವನ್ನೇ ಹೇಳಿದ್ದೀರಿ, ಧನ್ಯವಾದಗಳು.ಕನ್ನಡಿಗರಿಗೆ ಇದೆಂತ ಅವಮಾನ...!! ಬಿಜೆಪಿ ಪಕ್ಷ ದಿವಾಳಿಯಾಗಿದೆಯೇ?
ಇದನ್ನೂ ಓದಿ: ಮಹಿಳೆಯರ ಜೊತೆ ಪ್ರಿಯಾಂಕ ಗಾಂಧಿ ಸಂವಾದ- ಇಂದಿರಾ ಹೊಗಳಿದಾಕೆಗೆ ಪ್ರೀತಿಯ ಅಪ್ಪುಗೆ
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಮತದಾರರು ಆಯ್ಕೆ ಮಾಡುವುದು ತಮ್ಮ ಸೇವೆ ಮಾಡುವ ಪ್ರತಿನಿಧಿಗಳನ್ನೆ ಹೊರತು, ದೆಹಲಿ ದೊರೆಯ ಸೇವೆ ಮಾಡುವ ಗುಲಾಮರನ್ನಲ್ಲ.ಅಮಿತ್ ಶಾ ಅವರೇ, ಪ್ರಜಾಪ್ರಭುತ್ವ ವ್ಯವಸ್ಥೆಗಷ್ಟೇ ಅಲ್ಲ, ಸ್ವಾಭಿಮಾನಿ ಕನ್ನಡಿಗರಿಗೂ ನೀವು ಅವಮಾನ ಮಾಡಿದ್ದೀರಿ.
ನಮ್ಮ ಬ್ಯಾಂಕುಗಳು, ಬಂದರು, ವಿಮಾನ ನಿಲ್ದಾಣಗಳನ್ನು ಗುಜರಾತಿ ವ್ಯಾಪಾರಿಗಳಿಗೆ ಮಾರಿಬಿಟ್ಟಿರಿ, ನಮ್ಮ ಹೆಮ್ಮೆಯ ನಂದಿನಿಯನ್ನೂ ಕಬಳಿಸಲು ಹೊಂಚು ಹಾಕುತ್ತಿದ್ದೀರಿ.ಈಗ ಇಡೀ ಕರ್ನಾಟಕವನ್ನೇ ಖರೀದಿಸಲು ಹೊರಟಿದ್ದೀರಾ?ನಿಮ್ಮ ದುರಾಹಂಕಾರದ ಮಾತುಗಳಿಗೆ ರಾಜ್ಯದ ಸ್ವಾಭಿಮಾನಿ ಕನ್ನಡಿಗರು ಚುನಾವಣೆಯಲ್ಲಿಯೇ ಉತ್ತರ ನೀಡಲಿದ್ದಾರೆ,ಕಾದುನೋಡಿ.
ಕನ್ನಡದ ಕತ್ತು ಹಿಚುಕಿ ಹಿಂದಿ ಹೇರುವ ನಿಮ್ಮ ಕಟುಕತನ, ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ @AmitShah
ಅವರೇ.. 5/6…— Siddaramaiah (@siddaramaiah) April 25, 2023
ಮಾನ್ಯ ಅಮಿತ್ ಶಾ ಅವರೇ ಗೋಲ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಓದಿದದರಷ್ಟೇ ಸಾಲದು, ಬಾಬಾ ಸಾಹೇಬ್ ಅಂಬೇಡ್ಕರರು ಬರೆದಿರುವ ಸಂವಿಧಾನವನ್ನೂ ಪುರುಸೊತ್ತು ಮಾಡಿಕೊಂಡು ಓದಿ. ದೆಹಲಿಯಲ್ಲಿ ಕೂತು ರಾಜ್ಯವನ್ನು ಆಳಲು ಇದು ರಾಜಪ್ರಭುತ್ವ ಅಲ್ಲ,ಇದು ಪ್ರಜಾಪ್ರಭುತ್ವ.ತಿಳಿದಿರಲಿ.ಕನ್ನಡದ ಕತ್ತು ಹಿಚುಕಿ ಹಿಂದಿ ಹೇರುವ ನಿಮ್ಮ ಕಟುಕತನ, ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಭೂಮಿಗೆ ಮೊದಲು ಬಂದಿದ್ದು ಕೋಳಿನಾ? ಮೊಟ್ಟೆನಾ? Chat GPT ಕೊಟ್ಟೇ ಬಿಡ್ತು ಉತ್ತರ!
ಮಾನ್ಯ ಅಮಿತ್ ಶಾ ಅವರೇ,ರಾಜ್ಯದ ಬಿಜೆಪಿನಾಯಕರು ನಿಮ್ಮ ಅಜ್ಞೆಗೆ ಗೋಣು ಆಡಿಸುವ ಗುಲಾಮರಾಗಿರಬಹುದು, ಆದರೆ ನೆಲ, ಜಲ, ಭಾಷೆಯ ರಕ್ಷಣೆ ಮತ್ತು ಕನ್ನಡತನದ ಅಸ್ಮಿತೆಯ ಪ್ರಶ್ನೆ ಎದುರಾದಾಗ ನಮ್ಮ ಸ್ವಾಭಿಮಾನಿ ಕನ್ನಡಿಗರು ಜಾತಿ, ಧರ್ಮ, ಪಕ್ಷ, ಪಂಥ ಬಿಟ್ಟು ಬೀದಿಗೆ ಇಳಿದು ರಕ್ಷಿಸಿಕೊಳ್ಳುತ್ತಾರೆ.ಕನ್ನಡಿಗರನ್ನು ಕೆಣಕಿದ್ದೀರಿ, ಅನುಭವಿಸುತ್ತೀರಾ? ಎಂದು ಸಿದ್ದರಾಮಯ್ಯ ಅಮಿತ್ ಶಾ ವಿರುದ್ಧ ಹರಿಹಾಯ್ಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.