ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ! ನಾಳೆ ಈ ಎಲ್ಲಾ ರಸ್ತೆಗಳು ಬಂದ್ !
Karnataka Assembly Election :28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 30ರಿಂದ 35 ಕಿ.ಮೀ. ವರೆಗೆ ಈ ರೋಡ್ ಶೋ ನಡೆಯಲಿದೆ.
Karnataka Assembly Election : ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಹತ್ತಿರವಾಗುತ್ತಿದೆ. ರಾಜ್ಯದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಅಭ್ಯರ್ಥಿಗಳ ಪ್ರ ಪ್ರಚಾರಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ.
28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 30ರಿಂದ 35 ಕಿ.ಮೀ. ವರೆಗೆ ಈ ರೋಡ್ ಶೋ ನಡೆಯಲಿದೆ. ಮೇ 06 ಹಾಗೂ ಮೇ 07 ರೋಡ್ ಶೋ ಇರುವುದರಿಂದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ.
ಇದನ್ನೂ ಓದಿ : "ಬಿಜೆಪಿ ಅವರ ಭ್ರಷ್ಟಾಚಾರದ ಲೂಟಿ ಸುಮಾರು 150,000 ಲಕ್ಷ ಕೋಟಿ ಆಗಿದೆ"- ದಿನೇಶ್ ಗೂಂಡುರಾವ್ ಆರೋಪ
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಯಲಿರುವುದರಿಂದ ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ ಎಂದು ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದಾರೆ. ಶನಿವಾರ ಒಟ್ಟು ಮೂವತ್ತನಾಲ್ಕು ರಸ್ತೆಗಳನ್ನು ಬಳಸದಂತೆ ಮಾರ್ಗ ಸೂಚಿಯಲ್ಲಿ ಸೂಚಿಸಿದ್ದಾರೆ.
ಶನಿವಾರ ಯಾವೆಲ್ಲ ರಸ್ತೆಗಳು ಬಂದ್? :
ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮಾರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ, ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳಲ್ಲಿ ನಾಳೆ ಸಂಚಾರ ನಿಷೇಧಿಸಲಾಗಿದೆ.
ಇದನ್ನೂ ಓದಿ : Karnataka Election 2023: ವರುಣಾದಲ್ಲಿ ಸಿದ್ದರಾಮಯ್ಯಗೆ ಸಾಥ್ ನೀಡಿದ ಸ್ಟಾರ್ ನಟ-ನಟಿಯರು
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.