ಮೇಣದ ಬತ್ತಿ ಜಾಥ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ

ಬೆಂಗಳೂರು: ಬಿಬಿಎಂಪಿಯ ಕಂದಾಯ ಅಧಿಕಾರಿ ಹೆಬ್ಬಾಳ ವಿಭಾಗ, ಸಂಜಯ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕಡ್ಡಾಯ ಮತದಾನಕ್ಕಾಗಿ ಜಾಗೃತಿ ಮೂಡಿಸಲು ಮೇಣದ ಬತ್ತಿ  ಬೆಳಗಿಸುವ ಮೂಲಕ ಜಾಥಾ ಕಾರ್ಯಕ್ರಮಕ್ಕೆ ವಲಯ ಆಯುಕ್ತರಾದ ರವೀಂದ್ರ ಪಿ.ಎನ್, ಅಪರ ಜಿಲ್ಲಾ ಚುನಾವಣಾಧಿಕಾರಿ(ಉತ್ತರ) ಮತ್ತು ಜಂಟಿ ಆಯುಕ್ತರು(ಮಹದೇವಪುರ) ಲಿಂಗಮೂರ್ತಿ,  ಪೂರ್ವ ಜಂಟಿ ಆಯುಕ್ತರಾದ ಪಲ್ಲವಿ ಕೆ.ಆರ್, ಚುನಾವಣೆ ಅಧಿಕಾರಿಗಳಾದ ಪ್ರಸನ್ನ ಕುಮಾರ್ ರವರು ಚಾಲನೆ ನೀಡಿದರು.  

Written by - Zee Kannada News Desk | Last Updated : May 7, 2023, 09:49 AM IST
  • ಬೆಂಗಳೂರುನಗರ ಪ್ರದೇಶದಲ್ಲಿ ಹಿಂದಿನ ಚುನಾವಣೆಯಲ್ಲಿ ಮತದಾನ ಸಂಖ್ಯೆ ಬಹಳ ಕಡಿಮೆಯಾಗಿತ್ತು.
  • ಡಾಲರ್ಸ್ ಕಾಲೋನಿಯಲ್ಲಿ ಕಳೆದ ಬಾರಿ ಶೇಕಡ 38 ರಷ್ಟು ಮಾತ್ರ ಮತದಾನವಾಗಿತ್ತು
  • ನಗರ ಮತದಾರರು ಮನೆಯಿಂದ ಹೊರಬಂದು ಮತದಾನ ಮಾಡಬೇಕು,
ಮೇಣದ ಬತ್ತಿ ಜಾಥ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ title=

Karnataka Election : ಬೆಂಗಳೂರುನಗರ ಪ್ರದೇಶದಲ್ಲಿ ಹಿಂದಿನ ಚುನಾವಣೆಯಲ್ಲಿ ಮತದಾನ ಸಂಖ್ಯೆ ಬಹಳ ಕಡಿಮೆಯಾಗಿತ್ತು. ಡಾಲರ್ಸ್ ಕಾಲೋನಿಯಲ್ಲಿ ಕಳೆದ ಬಾರಿ ಶೇಕಡ 38 ರಷ್ಟು ಮಾತ್ರ ಮತದಾನವಾಗಿತ್ತು ಅದರಿಂದ ಮತದಾರರ ಮನಸ್ಸು ಬದಲಾಗಬೇಕು.

ನಗರ ಮತದಾರರು ಮನೆಯಿಂದ ಹೊರಬಂದು ಮತದಾನ ಮಾಡಬೇಕು, ಅವರ ಮತದಾನ ಮನಸ್ಸು ಮಾಡಬೇಕು ಎಂದು ಮೇಣಬತ್ತಿ ದೀಪ ಬೆಳಗಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ-ʼಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ, ಜೆಡಿಎಸ್‌ 20 ದಾಟಲ್ಲʼ

ಸಂವಿಧಾನದಲ್ಲಿ ನೀಡಿರುವ ಮತದಾನದ ಹಕ್ಕುನ್ನು ಪ್ರತಿಯೊಬ್ಬರು ಚಲಾಯಿಸಬೇಕು ಮತ್ತು ಮೇ 10 ರಜಾ ಎಂದು ಪ್ರವಾಸಕ್ಕೆ ಹೋಗದೇ ಕಡ್ಡಾಯವಾಗಿ ಮತದಾನ ಮಾಡಿ. ಮೊಬೈಲ್ ಆಪ್ ಮೂಲಕ ನಿಮ್ಮ ಎಲ್ಲಿದೆ ಮತ್ತು ಚುನಾವಣೆಯಲ್ಲಿ ಅಭ್ಯರ್ಥಿ ಅಕ್ರಮ ಮಾಡಿದರೆ ಸಿ.ವಿಜಿಲ್ ನಲ್ಲಿ ದೂರು ದಾಖಲು ಮಾಡಬಹುದು.

ಭಾರತ ಚುನಾವಣೆ ಆಯೋಗ ಮತ್ತು ಬಿಬಿಎಂಪಿ ಸಹಯೋಗ ಭಯಮುಕ್ತ ಮತ್ತು ನಿರ್ಭಿತಿಯಿಂದ ಮತದಾನ ಮಾಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮೇ 10 ಮತದಾನ ಮಾಡಿ ಉತ್ತಮ ಜನಪ್ರತಿನಿಧಿ, ಉತ್ತಮ ಸರ್ಕಾರ ಆಯ್ಕೆ ಮಾಡಿ ಕ್ಯಾಂಡಲ್ ಲೈಟ್ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ-Karnataka Elections 2023: 'RSS ಮೇಲೆ ಸರ್ದಾರ್ ಪಟೇಲ್ ನಿಷೇಧ ವಿಧಿಸಿದ್ದರು'

ಡಾಲರ್ಸ್ ಕಾಲೋನಿಯ ಪ್ರಮುಖ ರಸ್ತೆಗಳಲ್ಲಿ ಕ್ಯಾಂಡಲ್ ಲೈಟ್ ಜಾಥ ಸಾಗಿತು ಮತ್ತು ಕೀಲು ಕುದುರೆ ಮತ್ತು ತಮಟೆ ವಾದ್ಯ, ಗೊಂಬೆಗಳ ನೃತ್ಯ ಪ್ರದರ್ಶನ ಸಹ ಏರ್ಪಡಿಸಲಾಗಿತ್ತು.

ವಿಶೇಷ ಆಹ್ವಾನಿತರಾಗಿ ಹೆಬ್ಬಾಳ ವಿಭಾಗದ ಕಂದಾಯ ಅಧಿಕಾರಿಗಳಾದ ಶ್ರೀನಿವಾಸ್ ಮೂರ್ತಿ, ಆರ್.ಟಿ.ನಗರದ   ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಗಿರೀಶ್, ಎಸ್.ಜಿ.ಸಿ.ಇ ಯ ಪ್ರಾಂಶುಪಾಲರಾದ ಆರ್.ಲತಾ ಕುಮಾರಿ, ಹೆಬ್ಬಾಳ ವಿಭಾಗದ ಆರೋಗ್ಯ ಅಧಿಕಾರಿಗಳಾದ ಡಾ.ನಯನತಾರ ಪಾಟೀಲ್, ಸಹಾಯಕ ಕಾರ್ಯನಿರ್ವಾಹಕ  ಅಭಿಯಂತರರಾದ(ಘನತ್ಯಾಜ್ಯ) ಶ್ರೀ ರುದ್ರಮುನಿ, ಸಹಾಯ ಕಂದಾಯ ಅಧಿಕಾರಿಗಳು ಹಾಗೂ ಸ್ವೀಪ್ ಉಸ್ತುವಾರಿಗಳಾದ ಬಿ.ಟಿ.ಶಿವಕುಮಾರ್, ಹೆಬ್ಬಾಳ ವಿಭಾಗದ ಸಹ ಕಂದಾಯ ಅಧಿಕಾರಿಗಳಾದ ಶ್ರೀ ನಿರಂಜನ್, ಸಹಾಯಕ ಕಂದಾಯ ಅಧಿಕಾರಿಗಳಾದ ಮುಯಿಬ್ ಉಲ್ಲಾ, ಬಿಬಿಎಂಪಿ ನೌಕರರು ಮತ್ತು ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News