ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. 134ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ ಸ್ಪಷ್ಟ ಬಹುಮತದ ಸರ್ಕಾರ ರಚಿಸುವುದು ಖಚಿತವಾಗಿದೆ. ಮತ್ತೊಮ್ಮೆ ಸರ್ಕಾರ ರಚಿಸುವ ಕನಸು ಕಂಡಿದ್ದ ಬಿಜೆಪಿ ಕೇವಲ 67 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ದಾಟಿ ಅಭೂತಪೂರ್ವ ಯಶಸ್ಸು ಕಂಡಿದೆ. ಆದರೆ ಬಸವರಾಜ ಬೊಮ್ಮಾಯಿ ಸಂಪುಟದ ಘಟಾನುಘಟಿ ಸಚಿವರು ಮಕಾಡೆ ಮಲಗಿದ್ದಾರೆ. ಇದರಿಂದ ಬಿಜೆಪಿ ಮತ್ತು ಪಕ್ಷದ ನಾಯಕರಿಗೆ ದೊಡ್ಡ ಆಘಾತವುಂಟಾಗಿದೆ.
ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸಿ, ಸಂಸತ್ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆ.
We accept the verdict of people of Karnataka with due respect, we will take this verdict in our…
— Basavaraj S Bommai (@BSBommai) May 13, 2023
ಇದನ್ನೂ ಓದಿ: ಸೆಂಟ್ರಲ್ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ: ರಜತ್ ಉಳ್ಳಾಗಡ್ಡಿಮಠ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಒಪ್ಪಿಕೊಂಡಿರುವ ಬಸವರಾಜ ಬೊಮ್ಮಾಯಿ ಜನಾದೇಶವನ್ನು ಒಪ್ಪಿಕೊಂಡಿದ್ದಾರೆ. ‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸಿ, ಸಂಸತ್ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದು ಜಾತ್ಯತೀತ ಪಕ್ಷಕ್ಕೆ ಸಂದ ಜಯ!!
This is a victory for a secular party!!
People of Karnataka wanted a stable government that delivers as promised, and hence have given the mandate for Congress!!
— Siddaramaiah (@siddaramaiah) May 13, 2023
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಇದು ಜಾತ್ಯತೀತ ಪಕ್ಷಕ್ಕೆ ಸಂದ ಜಯ!!’ವೆಂದು ಹೇಳಿದ್ದಾರೆ. ‘ಕರ್ನಾಟಕದ ಜನರು ಭರವಸೆ ನೀಡಿದಂತೆ ನೀಡುವ ಸ್ಥಿರ ಸರ್ಕಾರವನ್ನು ಬಯಸಿದ್ದರು ಮತ್ತು ಆದ್ದರಿಂದ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.