ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇಂದು ಡಾ. ಕೆ. ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ವಿ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.
ಬೆಂಗಳೂರು: 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇಂದು ಡಾ. ಕೆ. ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ವಿ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.
ಇದನ್ನೂ ಓದಿ- Karnataka CM: ಯಾರಾಗ್ತಾರೆ ಕರುನಾಡ ಮುಂದಿನ ಸಿಎಂ? ಇಂದು ಹೊರಬೀಳಲಿದೆ ಮುಖ್ಯಮಂತ್ರಿ ಹೆಸರು!
ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೊಣ ಎಂದಷ್ಟೇ ಹೇಳಿದರು.
ಇದನ್ನೂ ಓದಿ- Karnataka New CM Oath Taking: ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ?
ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆಯೂ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರು ಮಾಡಿದ್ದಾರೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ