ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ‘ಕೈ’ ಸರ್ಕಾರದ ನೂತನ ಸಿಎಂ ಯಾರಾಗ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯನವರೇ ಕಾಂಗ್ರೆಸ್‍ನ ಸಿಎಂ ಆಗ್ತಾರೆ ಅನ್ನೋದು ಬಹುತೇಕ ಖಚಿತವಾಗಿದೆ. 65 ಸ್ಥಾನಗಳಲ್ಲಿ ಗೆದ್ದ ಬಿಜೆಪಿ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದೆ. ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರೆ, ಇತರರು 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಸ್ಪಷ್ಟಬಹುಮತ ಪಡೆದ ಬಳಿಕ ಖುಷಿ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ರಾಜ್ಯದ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡಿದ್ದಾರೆ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದ್ದಾರೆ. ಈ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್‌ ಮತ್ತು ರಣದೀಪ್ ಸುರ್ಜೆವಾಲಾ ಅವರು ಕಾರ್ಯತಂತ್ರ ರೂಪಿಸುವುದು, ಪ್ರಚಾರ ಮಾಡುವುದು, ಕೆಲವೊಮ್ಮೆ ಬಿಜೆಪಿಯವರ ಜೊತೆ ಜಗಳವನ್ನೂ ಮಾಡಿದ್ದಾರೆ. ಇವರೆಲ್ಲರಿಗೂ ವಿಶೇಷವಾಗಿ ಧನ್ಯವಾದ ತಿಳಿಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.


Election Result: 'ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್' ಭವಿಷ್ಯವಾಣಿ ನಿಜವಾಯಿತಾ...!


‘ಈಗಾಗಲೇ ನಾವು 5 ಗ್ಯಾರಂಟಿಗಳನ್ನು ನೀಡಿದ್ದೇವೆ. ಅದನ್ನು ಮೊದಲ ಸಂಪುಟ ಸಭೆಯಲ್ಲೇ ಆದೇಶ ಹೊರಡಿಸಿ ಜಾರಿಗೆ ಕೊಡುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಈ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗಲ್ಲ, ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಸಾಲ ಮಾಡಿ ದೇಶವನ್ನು ದಿವಾಳಿ ಮಾಡಿರುವುದು ಮೋದಿ ಅವರು. ರಾಜ್ಯವನ್ನು ದಿವಾಳಿ ಮಾಡಿರುವುದು ಕೂಡ ಬಿಜೆಪಿಯವರು’ ಎಂದು ಕಿಡಿಕಾರಿದ್ದಾರೆ.


ಸಿದ್ದರಾಮಯ್ಯ ಹೇಳಿದ್ದಾರೆ.


ಸಿಬಿಐನ ನೂತನ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.