ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೊದಲು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಲ್ಲಿಕಾರ್ಜುನ್ ಖರ್ಗೆಯವರು ಸಿಎಂ ಆಯ್ಕೆ ವಿಚಾರವಾಗಿ ಚರ್ಚಿಸಿದರು.
ಸಿದ್ದರಾಮಯ್ಯ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನೂ ಭೇಟಿಯಾದ ಮಲ್ಲಿಕಾರ್ಜುನ್ ಖರ್ಗೆ ಮಾತುಕತೆ ನಡೆಸಿದರು.
ಕಾಂಗ್ರೆಸ್ ಹೈಕಮಾಂಡ್ ಇನ್ನೂ ಸಹ ಯಾರು ಸಿಎಂ ಆಗ್ತಾರೆ ಅನ್ನೋ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಿಲ್ಲ.
ಹೀಗಾಗಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ಬಲ್ಲ ಮೂಲಗಳ ಪ್ರಕಾರ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಅನ್ನೋದು ಖಚಿತವಾಗಿದೆ. ಡಿಕೆಶಿಗೆ ಡಿಸಿಎಂ ಹುದ್ದೆಗಳ ಜೊತೆಗೆ ಪ್ರಬಲ ಖಾತೆ ನೀಡಲು ನಿರ್ಧರಿಸಲಾಗಿದೆಯಂತೆ.
ಮಲ್ಲಿಕಾರ್ಜುನ್ ಖರ್ಗೆ ಹಾಗೂ ಸಿದ್ದರಾಮಯ್ಯ ಭೇಟಿ ಮುಕ್ತಾಯವಾಗಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಿದ್ದರಾಮಯ್ಯನವರು ಚೆರ್ಚೆ ನಡೆಸಿದ್ದಾರೆ. ಸೋನಿಯಾಗಾಂಧಿ ಜೊತೆ ಚೆರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.