ಬೆಂಗಳೂರು: ಅಮುಲ್ ವಿಚಾರವಾಗಿ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ 'ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ'ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Online Medicine: ಆನ್‌ಲೈನ್‌ನಲ್ಲಿ ಔಷಧಿ ಖರೀದಿಸುವವರೇ ಎಚ್ಚರ..!


ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್  "◆ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ.
◆ಮೊಸರಿಗೆ ದಹಿ ಎಂದರೂ ಸಮರ್ಥನೆ
◆ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ
◆ಹಿಂದಿ ಹೇರಿಕೆಗೂ ಸಮರ್ಥನೆ.ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಅದು ಕಿಡಿ ಕಾರಿದೆ.


"ಈ ಬಾರಿ ಪರಮೇಶ್ವರ ಅವರನ್ನು ಸೋಲಿಸುತ್ತೇವೆ"


ಇನ್ನೂ ಮುಂದುವರೆದು ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿಯವರೇ, ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ? ಸಿಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ! ಎಂದು ಅದು ವ್ಯಂಗವಾಡಿದೆ.


ಇದಕ್ಕೂ ಮೊದಲು ಸಿಟಿ ರವಿ ಟ್ವೀಟ್ ಮಾಡಿ "ಗುಲಾಮರಿಗೆ ಇಟಾಲಿಯನ್ ಆಳ್ವಿಕೆಯಲ್ಲಿ ಯಾವುದೇ ತೊಂದರೆ ಇಲ್ಲ.ಆದರೆ ಭಾರತೀಯ ಬ್ರಾಂಡ್ ಅಮುಲ್ ತನ್ನ ಉತ್ಪನ್ನಗಳನ್ನು ಇತರ ಹಲವು ಬ್ರಾಂಡ್‌ಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡುವಾಗ ಅವರಿಗೆ ಸಮಸ್ಯೆ ಇದೆ.ಇದು ಎಂತಹ ಸೋತವರ ಗುಂಪಿದು! ಎಂದು ಟ್ವೀಟ್ ಮಾಡಿದ್ದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.