ಚಾಮರಾಜನಗರ: ಬಿಜೆಪಿ ಪ್ರಭಾವಿ ಮುಖಂಡ, ಲಿಂಗಾಯತ ಸಮುದಾಯದ ನಾಯಕ ವಿ.ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದ ಸತತ ನಾಲ್ಕನೇ ಬಾರಿ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಪಟ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ.


COMMERCIAL BREAK
SCROLL TO CONTINUE READING

ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು ಮೂರರಲ್ಲಿ ಕೈ ಜಯಭೇರಿ ಬಾರಿಸಿದೆ. ಚಾಮರಾಜನಗರದ ಮೂವರು ಕಾಂಗ್ರೆಸ್ ಶಾಸಕರಲ್ಲಿ 68 ರ ಹರೆಯದ ಪುಟ್ಟರಂಗಶೆಟ್ಟಿ ಹಿರಿಯ ಶಾಸಕರಾಗಿದ್ದು ಉಪ್ಪಾರ ಜಾತಿಯ ರಾಜ್ಯದ ಏಕೈಕ ಶಾಸಕ ಎಂಬ ಹೆಗ್ಗಳಿಕೆಯೂ ಇವರದ್ದಾಗಿದ್ದಾಗಿದೆ. ಹಾಗಾಗಿ ಸಿದ್ದು ಸಂಪುಟದಲ್ಲಿ ಸ್ಥಾನ ಗಿಟ್ಟಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. 


ಇದನ್ನೂ ಓದಿ- ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ 


ಸಿದ್ದು ಕಟ್ಟಾ ಬೆಂಬಲಿಗ- 4 ಬಾರಿ ಶಾಸಕ
ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿದ್ದು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಈಗಲೂ ನನಗೇ ಸಿದ್ದರಾಮಯ್ಯನೇ ಸಿಎಂ ಎನ್ನುವ ಮೂಲಕ ಗಮನ ಸೆಳೆದಿದ್ದರು. ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು. ಸಿದ್ದರಾಮಯ್ಯ ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಎಂಥಲೇ ಹೇಳಲಾಗುತ್ತಿದೆ. ಚಾಮರಾಜನಗರಕ್ಕೆ ಪ್ರಾತಿನಿಧ್ಯ ಕೊಡಬೇಕಾಗಿರುವುದರಿಂದ ಜೊತೆಗೆ, ಹಿಂದುಳಿದ ವರ್ಗ  ಉಪ್ಪಾರ ಸಮುದಾಯಕ್ಕೂ ಆದ್ಯತೆ ಕೊಡಬೇಕಿರುವುದರಿಂದ  ಪುಟ್ಟರಂಗಶೆಟ್ಟಿಗೆ ಮಂತ್ರಿ ಭಾಗ್ಯ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಗಬಹುದು ಎನ್ನಲಾಗಿದೆ.


ಇದನ್ನೂ ಓದಿ- Chamarajanagar Assembly Election Result 2023: ಸೋಮಣ್ಣ ಕೈಯಲ್ಲೂ ಆಗದ ಪುಟ್ಟರಂಗಶೆಟ್ಟಿ ಸೋಲು... ಕೈ ಭದ್ರ- ಕಮಲ ಛಿದ್ರ​


ಸೋಲಿಲ್ಲದ ಸರದಾರ
ಹಳೇ ಮೈಸೂರು ಭಾಗದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಕಳೆದ ನಾಲ್ಕು ಚುನಾವಣೆಗಳಿಂದ ಕೈ ಭದ್ರಕೋಟೆಯಾಗಿದ್ದು ಸಿ. ಪುಟ್ಟರಂಗಶೆಟ್ಟಿ ಕ್ಷೇತ್ರದಲ್ಲಿ ನಿರಂತರವಾಗಿ 4 ಬಾರಿ ಗೆದ್ದ ಮೊದಲ ಶಾಸಕರಾಗಿದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.


ಒಟ್ಟಿನಲ್ಲಿ ಸಿದ್ದು ಸಂಪುಟದಲ್ಲಿ ಸೋಮಣ್ಣ ಸೋಲಿಸಿ ಎರಡನೇ ಬಾರಿ ಸಚಿವರಾಗುವ ಉತ್ಸಾಹದಲ್ಲಿದ್ದಾರೆ ಚಾಮರಾಜನಗರದ ವಿಧಾನಸಭಾ ಕ್ಷೇತ್ರದ ಶಾಸಕ, ಸೋಲಿಲ್ಲದ ಸರದಾರ ಸಿ.ಪುಟ್ಟರಂಗಶೆಟ್ಟಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.