Karnataka Election 2023: ಮತದಾರರಿಗೆ ಮತದಾನಕ್ಕೆ ಬರುವಂತೆ ಮಮತೆಯ ಕರೆಯೋಲೆ
Karnataka Election 2023: ವಿಧಾನಸಭೆ ಚುನಾವಣೆ ಹಿನ್ನಲೆ ಮತದಾರರನ್ನು ಆಕರ್ಷಿಸಲು ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆಯನ್ನ ಯಾದಗಿರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಬಿಡುಗಡೆ ಮಾಡಿದೆ.
ಯಾದಗಿರಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಆಕರ್ಷಿಸಲು ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡುವುದರ ಮುಖಾಂತರ ಯಾದಗಿರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಪ್ರಸಕ್ತ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಜಿಲ್ಲಾಡಳಿತ ನಿತ್ಯ ಒಂದಿಲ್ಲೊಂದು ಮತದಾನ ಜಾಗೃತಿಗಾಗಿ ವಿನೂತನ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ಪ್ರಯೋಗದ ಮುಂದುವರೆದ ಭಾಗವಾಗಿ ಮತದಾರರಿಗೆ ಮದುವೆಯ ಆಮಂತ್ರಣದ ರೂಪದಲ್ಲಿ ಮತದಾನದ ಮಮತೆಯ ಕರೆಯೋಲೆ ಸಿದ್ದಗೊಂಡಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಆಗಮನಕ್ಕಾಗಿ ಸಿಂಗಾರಗೊಂಡು ಸಜ್ಜಾಗಿದೆ ಶಿವಮೊಗ್ಗದ ಆಯನೂರು
ಈ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವೀಪ್ ಸಮಿತಿಯು ಮತದಾರರ ಮಮತೆಯ ಕರೆಯೋಲೆ ಎಂಬ ಶೀರ್ಷಿಕೆ ಇಡಲಾಗಿದೆ. ಭಾರತ ಚುನಾವಣಾ ಆಯೋಗ ನಿಶ್ಚಯಿಸಿದಂತೆ ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಮತದಾನ ದಿನ ಸಲ್ಲುವ ಶುಭ ಮಹೂರ್ತದಲ್ಲಿ ಭಾರತ ಮಾತೆಯ ಪ್ರಭುದ್ದ ಪ್ರಜೆಯಾದ ಮತದಾರ ಜೊತೆ ಪ್ರಜಾಪ್ರಭುತ್ವ ಈ ಮಹತ್ವದ ಶುಭ ಕಾರ್ಯದಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿದು ಜನರಿಂದ ಜನರಿಗೋಸ್ಕರ ಸಂವಿಧಾನಬದ್ದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ವಿನಂತಿ ಎಂದು ಬರೆಯಲಾಗಿದೆ.
ಇದರಲ್ಲಿ ಮತದಾನದ ದಿನ ಮೇ 10, ಮುಹೂರ್ತ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ, ಮತದಾನ ಕೇಂದ್ರದ ಸ್ಥಳ ನಿಮ್ಮ ವಾರ್ಡ್, ನಿಮ್ಮ ಗ್ರಾಮದ ಮತಗಟ್ಟೆ ಎಂದು ಬರೆಯಲಾಗಿದೆ. ನಿಮ್ಮ ಮತ ಅಮೂಲ್ಯ ಕಟ್ಟಲಾರೆವು ಇದರ ಮೌಲ್ಯ. ಮತಗಟ್ಟೆಗೆ ಹೋಗಿ ಮತ ಚಲಾಯಿಸಿ. ಹಿರಿಯರು, ಕಿರಿಯರು, ಯುವಜನ ಎಲ್ಲರೂ ಮಾಡಲಿ ಮತದಾನ ಎಂದು ಸಹ ಬರೆದಿದೆ.ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂದು ಈ ಬಾರಿಯ ಚುನಾವಣೆಯ ಘೋಷವಾಕ್ಯ ಬರೆಯಲಾಗಿದೆ.
ವಿಶೇಷ ಸೂಚನೆ: ಹಣ, ಹೆಂಡ, ಇತರೆ ದುಶ್ಚಟಗಳ ಆಮಿಷಕ್ಕೆ ಒಳಗಾಗದೇ ನೈತಿಕ ಮತದಾನ ಮಾಡಿದರೆ ಅದೇ ನಿಮ್ಮ ಉಡುಗೊರೆ, ಆಶೀರ್ವಾದ ಎಂದು ಹಾಕಲಾಗಿದೆ.
ಇದನ್ನೂ ಓದಿ: ಮೇಣದ ಬತ್ತಿ ಜಾಥ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.