ಕನ್ನಡದ ಕತ್ತು ಹಿಚುಕಿ ಹಿಂದಿ ಹೇರುವ ನಿಮ್ಮ ಕಟುಕತನ, ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ನಾ ಖಾವುಂಗಾ ನಾ ಖಾನೇ ದೂಂಗ ಇದು ಪ್ರಧಾನಿ ಮೋದಿ ಜೀ ಅವರ ಸ್ಲೋಗನ್ ಆಗಿದೆ. ಆದರೆ ರಾಜ್ಯದಲ್ಲಿ ಮಾತ್ರ ಭ್ರಷ್ಟರಿಗೆ ಮಣೆ ಆಕ್ತಾ ಇದ್ದಾರೆ. ಮೋದಿ ಮತ್ತುಅಮಿತ್ ಶಾ ಅವರು ಈ ಭ್ರಷ್ಟಾಚಾರದ ಬಗ್ಗೆ ಯಾಕೆ ಮೌನವಾಗಿದ್ದಾರೆ. ಇಡಿ, ಸಿಬಿಐ , ಐಟಿ ಎಂಬ ಎಲ್ಲ ಅಸ್ತ್ರಗಳನ್ನು ಪ್ರಯೋಗಿಸುತ್ತಾರೆ. ಈ ತನಿಖಾ ಸಂಸ್ಥೆಗಳು ರಾಜ್ಯದಲ್ಲಿರುವ ಭ್ರಷ್ಟಾಚಾರದ ಕಡೆ ಯಾಕೆ ನೋಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಟೀಕಾ ಪ್ರಹಾರ ನಡೆಸಿದರು.
Karnataka Election 2023: ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ತಾಕತ್ತಿದ್ದರೆ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾಗಿ ಪಕ್ಷ ಸಂಘಟನೆ ಮಾಡಲಿ. ಸಿಎಂ, ವಿಪಕ್ಷ ನಾಯಕ ಸ್ಥಾನ ಇಲ್ಲ ಅಂದ್ರೆ ಕಾಂಗ್ರೆಸ್ಸಿಗೆ ಒದ್ದು ಬರ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಅವರ ಆಶೀರ್ವಾದ ಬೇಕು ಎಂದು ಹೇಳಿರುವುದು ಈ ರಾಜ್ಯಕ್ಕೆ ಮಾಡಿರುವ ದೊಡ್ಡ ಅಪಮಾನ.ನಿಮ್ಮ ಆಲೋಚನೆ, ಪರಿಶ್ರಮದಿಂದ ಈ ರಾಜ್ಯ ನಿರ್ಮಾಣವಾಗಿದೆ. ನೀವು ಅದೆಷ್ಟು ಬಾರಿ ಅಸಾಧ್ಯವಾದುದನ್ನು ಸಾಧ್ಯ ಮಾಡಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು
Dog Predicts: ಕರ್ನಾಟಕದಲ್ಲಿ ಚುನಾವಣೆ ಅಖಾಡ ಜೋರಾಗಿ ನಡೆಯುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಪ್ರಕ್ರಿಯೆಯು ಮುಗಿದಿದೆ. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರೆಂದು ಕಾಲ ಬೈರವ ಸುಳಿವು ನೀಡಿದೆ.
ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Karnataka Assembly Election 2023: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಎಚ್ಡಿಕೆ ಗುಣಮುಖರಾಗಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡಿದ್ದಾರೆ.
Karnataka Assembly Election 2023: ಸಿದ್ಧರಾಮಯ್ಯರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದು ಹೇಳಿದರು.
Karnataka assembly Election: ನಿನ್ನೆ ಕೇಂದ್ರ ಗೃಹ ಸಚಿವರ ಸಭೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬೇಡಿ ಎಂಬುವಂತ ಮಾತು ಕೇಳಿ ಬಂದಿರುವ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
Karnataka assembly Election 2023: ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಕಾಮನ್ ಆಗಿ ಅಮಿತ್ ಶಾ ಸಭೆ ನಡೆಸಿದ್ದಾರೆ. ಪ್ರಧಾನ ಮಂತ್ರಿಗಳ ಪ್ರವಾಸದ ವಿವವರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಅವರ ಜತೆಗೆ ಚರ್ಚೆ ನಡೆಸಿದ್ದಾರೆಂದು ಹೇಳಿದರು.
H. D. Deve Gowda : ಕರುನಾಡ ಕುರುಕ್ಷೇತ್ರಕ್ಕೆ ಬೆರಳೆಣಿಕೆ ದಿನಗಳು ಮಾತ್ರ ಬಾಕಿಯಿವೆ. ಗೆಲ್ಲುವ ಹುಮ್ಮಸ್ಸಿನಲ್ಲಿ ಚುನಾವಣೆ ಅಖಾಡಕ್ಕೆ ಇಳಿದಿರುವ ಕದನ ಕಲಿಗಳು, ಜನರ ಮನ ತಲುಪಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈಗಾಗಲೇ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ.
Karnataka assembly Election 2023: ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆ.ಎಸ್.ಈಶ್ವರಪ್ಪರವರು ಅಗತ್ಯವಿದ್ದ ಸಂದರ್ಭದಲ್ಲಿ ತಮ್ಮ ಸಹಾಯವನ್ನು ವೈಯಕ್ತಿಕವಾಗಿ ಪಡೆದವರು ನಮಗೆ ಮತ ಚಲಾಯಿಸುತ್ತಾರೆ. ಹಾಗೆ ರಾಷ್ಟ್ರೀಯವಾದಿ ಮುಸ್ಲಿಮರು ಖಂಡಿತವಾಗಿಯೂ ಬಿಜೆಪಿಗೆ ಮತ ಹಾಕುತ್ತಾರೆ ಎಂದಿದ್ದಾರೆ.
Karnataka assembly Elections 2023: ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ಗೆ ಆಗಮಿಸಿದ್ದಾರೆ.
Karnataka Assembly Election 2023: ಕಳೆದ 3 ದಿನಗಳ ಕಾಲ ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸ ಮಾಡಿದ್ದು, ಪಕ್ಷದ ಪರವಾಗಿ ಪ್ರಚಾರದ ಜೊತೆಗೆ ದೇವರ ಸನ್ನಿಧಿಗೂ ಭೇಟಿ ನೀಡಿದ್ದೇನೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲ, ಹಳ್ಳಿಗಳಲ್ಲೂ ಸಾವಿರಾರು ಜನ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka Assembly Elections: ಇಂದು ಮೈಸೂರಿನಲ್ಲಿ ಒಂದೆಡೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
Printing Press : ಹಗಲು ರಾತ್ರಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸುಮ್ಮನೆ ಇರುವಂತೆ ಆಗಿದೆ. ಚುನಾವಣೆಯ ಆದಾಯದ ನಿರೀಕ್ಷೆಯಲ್ಲಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಇದು ಪ್ರಿಟಿಂಗ್ ಪ್ರೆಸ್ ಗಳ ಸದ್ಯದ ಚಿತ್ರಣ. ಎಲೆಕ್ಷನ್ ಟೈಮ್ನಲ್ಲಿ ಪಂಪ್ಲೆಟ್ ಗಳಿಗೆ ಡಿಮ್ಯಾಂಡೇ ಇಲ್ಲದಂತಾಗಿದ್ದು,ಹಿಂದೆಲ್ಲ ಲಕ್ಷದ ಲೆಕ್ಕದಲ್ಲಿ ಪ್ರಿಟಿಂಗ್ ಮಾಡುತ್ತಿದ್ದ ಮಾಲೀಕರು ಈಗ ಸಾವಿರ ಆರ್ಡರ್ ಬಾರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆಲ್ಲ ಕಾರಣ ಡಿಜಿಟಲ್ ಮೀಡಿಯಾ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.