Karnataka Budget Benefits To Farmers : ಚುನಾವಣಾ ಸನಿಹದಲ್ಲಿ ರೈತರನ್ನು ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ನೀಡುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಬೆಟ್‌ನಲ್ಲಿ ಘೋಷಿಸಿದ್ದಾರೆ.
ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದೊಂದು ಬಿಸಿಲ್ಗುದುರೆ ಬಜೆಟ್, ಕೈಗೆ ಏನೂ ಸಿಗಲ್ಲ. ಈ ಬಜೆಟ್ ಜಾತ್ರೆಯಲ್ಲಿ ಸಿಗುವ ಬಣ್ಣದ ಕನ್ನಡಕದಂತೆ, ಅದರಲ್ಲಿ ನೋಡಿದರೆ ಏನೂ ಕಾಣುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಛೇಡಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಅಧಿಕಾರದಲ್ಲಿದ್ದಾಗ ಸರ್ಕಾರ ಜನರಿಗೆ ಏನೂ ಮಾಡಿಲ್ಲ. ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿ ಮಾಡಿಲ್ಲ. ಈ ಬಾರಿ ಬಜೆಟ್ ನಲ್ಲಿ ಜಾರಿ ಮಾಡುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಂತೆ ಇದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇಕಡ 90ರಷ್ಟು ಅನುಷ್ಠಾನಕ್ಕೆ ಬಂದಿಲ್ಲ. ಈ ಬಜೆಟ್ ಕೂಡ ಅದೇ ರೀತಿ ಅನುಷ್ಠಾನದ ಬದ್ಧತೆ ಇಲ್ಲದ ಘೋಷಣೆಗಳ ಪುಸ್ತಕದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಮುಜರಾಯಿ ಇಲಾಖೆ ಮತ್ತು ಮಹಿಳಾ ಕಲ್ಯಾಣಕ್ಕೆ ದಾಖಲೆಯ ಅನುದಾನ ನೀಡುವ ಮೂಲಕ ಹಣಕಾಸು ಇಲಾಖೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬಣ್ಣಿಸಿದ್ದಾರೆ.
Karnataka Budget 2023 : ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಯಶಸ್ವಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬಡ್ಡಿ ರೂಪದಲ್ಲಿ ಹೆಚ್ಚು ಪಾವತಿ ಮಾಡಬೇಕಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೂ ಕಡಿಮೆಯಾಗುತ್ತದೆ. ಮುಂದಿನ ವರ್ಷಕ್ಕೆ 77,750 ಕೋಟಿ ರೂ. ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಸಾಲದ ಪ್ರಮಾಣ ಶೇ.95ರಷ್ಟು ಹೆಚ್ಚಾಗಿದೆ. ಹೀಗಾದಾಗ ಬಜೆಟ್ ಅಭಿವೃದ್ಧಿಪರವಾಗಿರಲು ಹೇಗೆ ಸಾಧ್ಯ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Budget 2023: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 15 ನೇ ವಿಧಾನಮಂಡಲದ ಕೊನೆಯ ಬಜೆಟ್ ಮಂಡಿಸಿದ್ದು, 2023-24 ಆರ್ಥಿಕ ವರ್ಷದ ಅಂದಾಜು ಪ್ರಕಾರ ರೂ. 402.43 ಕೋಟಿ ರಾಜಸ್ವ ಲೆಕ್ಕ ಹೆಚ್ಚುವರಿ ಆಗಲಿದೆ ಎಂದು ಸರ್ಕಾರ ತಿಳಿಸಿದೆ.
Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.
Karnataka Budget 2023: ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಈ ಸ್ಥಾನಕ್ಕೆ ಏರಿದ್ದು ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಯಿಂದಲೇ. ಬೆಂಬಲ ಬೆಲೆ ಇಲ್ಲ, ಸಾಲ ಮನ್ನವೂ ಇಲ್ಲ, ರೈತರೆಡೆಗೆ ಆಸಕ್ತಿಯೂ ಇಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
Karnataka budget 2023 : 10,000 ವಸತಿರಹಿತ ಮೀನುಗಾರರಿಗೆ ವಸತಿ ನಿರ್ಮಾಣ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ. ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಮತ್ಸ ಸಿರಿ ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ.
Karnataka Budget 2023 : ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ 'ಶ್ರೀ ಭುವನೇಶ್ವರಿ' ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಆಯವ್ಯಯದಲ್ಲಿ ಘೋಷಣೆ ಮಾಡಿದರು.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
Karnataka Women Empowerment Budget 2023 : ಜಿಎಸ್‌ಟಿ ಸಂಗ್ರಹ ಶೇ 26ರಷ್ಟು ಹೆಚ್ಚಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹ, ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದು ಸಂತಸದ ವಿಚಾರ ಎಂದರು.