Budget 2023: ವೈದ್ಯಕೀಯ ಕಾಲೇಜು & ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೂ ಸಿಎಂ ಬಜೆಟ್‌ನಲ್ಲಿ ಕೊಡುಗೆ!

Karnataka Budget 2023: ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಮೀಸಲಿಡಲಾಗಿದೆ.  

Written by - Zee Kannada News Desk | Last Updated : Jul 7, 2023, 01:58 PM IST
  • ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆಬಜೆಟ್‌
  • ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳಿಗೆ ಬಜೆಟ್‌ ಮೀಸಲಾತಿ
  • ವಿಧಾನ ಸಭೆಯಲ್ಲಿ ಬಜೆಟ್‌ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
Budget 2023: ವೈದ್ಯಕೀಯ ಕಾಲೇಜು & ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೂ ಸಿಎಂ ಬಜೆಟ್‌ನಲ್ಲಿ ಕೊಡುಗೆ! title=

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ  450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.  ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.

120.    ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು.

ಇದನ್ನೂ ಓದಿ: Karnataka Budget 2023-24: ಶಾಲಾ ಶಿಕ್ಷಣಕ್ಕೆ ಉತ್ತೇಜನ ನೀಡಿದ ಸಿಎಂ ಸಿದ್ದು ಬಜೆಟ್ 

121.    ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು. 

122.    NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್‌ 
ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ (NAFLD) ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು.

ಇದನ್ನೂ ಓದಿ: Budget 2023: ಕುರಿ ಮೇಕೆ ಹಸು ಎಮ್ಮೆ ಆಕಸ್ಮಿಕ ಸಾವಿಗೆ ಮತ್ತೆ "ಅನುಗ್ರಹ " ಯೋಜನೆ ಜಾರಿ
 
123.    ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. 

124.    ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ 

ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳನ್ನು ಸ್ಥಾಪಿಸಲಾಗುವುದು. 

125.    ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ (Trauma Care Center) ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು. 

ಇದನ್ನೂ ಓದಿ: ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

126.    ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (Kidwai Memorial Institute of Oncology) ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು. 

127.    ಚಿತ್ರದುರ್ಗದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. 

128.    ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News