Karnataka Budget 2023: ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ.! ಏನಿದರ ತಾತ್ಪರ್ಯ?

Karnataka Budget 2023 : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ನೇ ಬಾರಿ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಬಜೆಟ್‌ ಆರಂಭದಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆದರು. 

Written by - Chetana Devarmani | Last Updated : Feb 17, 2023, 11:15 AM IST
  • 2 ನೇ ಬಾರಿ ಬಜೆಟ್‌ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ
  • ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ
  • ಬಜೆಟ್‌ಗೂ ಮುನ್ನವೇ ಸದನದಲ್ಲಿ ಸೃಷ್ಟಿಯಾಯಿತು ಗೊಂದಲ
Karnataka Budget 2023: ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ.! ಏನಿದರ ತಾತ್ಪರ್ಯ? title=
Congress Leader Siddaramaiah

ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ನೇ ಬಾರಿ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಬಜೆಟ್‌ ಆರಂಭದಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆದರು. ಸದನದಲ್ಲಿ ಸೃಷ್ಟಿಯಾದ ಈ ಗೊಂದಲಕ್ಕೆ ಕಾರಣ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿವಿ ಮೇಲೆ ಹೂವು ಇಟ್ಟುಕೊಂಡು ಸದನಕ್ಕೆ ಬಂದಿದ್ದು. ಈ ಬಗ್ಗೆ ಮೊದಲ ಸಚಿವ ಆರ್‌. ಅಶೋಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅವರೊಂದಿಗೆ ಧ್ವನಿಗೂಡಿಸಿದ ಸಿಎಂ ಬೊಮ್ಮಾಯಿ, ಇಷ್ಟು ದಿನ ಅವರು ಜನರ ಕಿವಿ ಮೇಲೆ ಹೂವಿಟ್ಟಿದ್ಧಾರೆ. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನ ಇವರ ಕಿವಿ ಮೇಲೆ ಹೂವಿಡುತ್ತಾರೆ ಎಂದರು.

ಇದನ್ನೂ ಓದಿ :"ಈ ಸರ್ಕಾರದ್ದು ಕೇವಲ ಭಾಷಣಕ್ಕೆ ಸೀಮಿತವಾಗಿರುವ ಬಜೆಟ್"

ಇದಕ್ಕೆ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ನಾನು ಹೂವು ಇಟ್ಟುಕೊಂಡಿದ್ದು, ಈ ಬಜೆಟ್‌ ಮೂಲಕ ಇವರು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಅಂತ ತಿಳಿಸಲು ಎಂದು ಅಸಮಾಧಾನ ಹೊರಹಾಕಿದರು. ಈ ವೇಳೆ ಎರಡೂ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಈ ವೇಳೆ, ಸ್ಪೀಕರ್‌ ಕಾಗೇರಿಯವರು, "ಇಷ್ಟುದಿನ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದ ಸಿದ್ದರಾಮಯ್ಯನವರೇ ಇಂದು ಕೇಸರಿ ಕಲರ್‌ ಹೂವನ್ನು ಕಿವಿಯಲ್ಲಿ ಇಟ್ಟುಕೊಂಡು ಬಂದಿದ್ದಾರೆ" ಎಂದರು. 

ಬಜೆಟ್‌ಗೂ ಮುನ್ನವೇ ಸದನ ಇಂತಹದೊಂದು ಗೊಂದಲಕ್ಕೆ ಸಾಕ್ಷಿಯಾಯಿತು. ಬಳಿಕ ಸಿಎಂ ಬೊಮ್ಮಾಯಿ ಅವರು ತಮ್ಮ ಆಯವ್ಯಯ ಮಂಡನೆ ಆರಂಭಿಸಿದರು. ಕುವೆಂಪು ಕವನದ ಸಾಲು ಓದುತ್ತಾ ಸಿಎಂ ಬಜೆಟ್ ಭಾಷಣ ಆರಂಭಿಸಿದರು. ಹೊಸ ದೃಷ್ಟಿಕೋನದೊಂದಿಗೆ ಆಯವ್ಯಯ ಮಂಡಿಸುತ್ತಿರುವುದಾಗಿ ಸಿಎಂ ಹೇಳಿದರು. 25 ವರ್ಷಗಳ ದೃಷ್ಟಿಕೋನದೊಂದಿಗೆ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಸದನಕ್ಕೆ ತಿಳಿಸಿದರು. 

ಇದನ್ನೂ ಓದಿ :Karnataka Budget 2023 : ರಾಜ್ಯ ಬಜೆಟ್‌ ಸಿದ್ಧತೆಯಿಂದ ಮಂಡನೆವರೆಗೆ ಈ 10 ವಿಚಾರ ನಿಮಗೆ ಗೊತ್ತೇ.!?

ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು. ಬಿಜೆಪಿ ಸರ್ಕಾರವು ಹಿಂದಿನ ಬಜೆಟ್ ಮತ್ತು 2018 ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ಜನರನ್ನು ಮೂರ್ಖರನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಕರ್ನಾಟಕ ಕಾಂಗ್ರೆಸ್ ಇದನ್ನು #KiviMeleHoova ಎಂದು ಕರೆಯುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News