Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌

Karnataka Women Empowerment Budget 2023 : ಜಿಎಸ್‌ಟಿ ಸಂಗ್ರಹ ಶೇ 26ರಷ್ಟು ಹೆಚ್ಚಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹ, ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದು ಸಂತಸದ ವಿಚಾರ ಎಂದರು.   

Written by - Chetana Devarmani | Last Updated : Feb 17, 2023, 11:22 AM IST
  • 2023-24ನೇ ಸಾಲಿನ ರಾಜ್ಯ ಬಜೆಟ್‌
  • ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌
  • ಜಿಎಸ್‌ಟಿ ಸಂಗ್ರಹ ಶೇ 26ರಷ್ಟು ಹೆಚ್ಚಾಗಿದೆ
Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌  title=
Karnataka Budget 2023

ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಂಡಿಸಿದ್ದಾರೆ. ಕೇಂದ್ರ ಬಜೆಟ್‌ಗೆ ಹೋಲಿಸಿದರೆ ರಾಜ್ಯ ಬಜೆಟ್‌ ಭಿನ್ನವಾಗಿರುತ್ತದೆ. ಇಂದು ಬೊಮ್ಮಾಯಿ ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಇದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್‌ ಆಗಿದೆ. ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದು, ಆರಂಭದಲ್ಲಿಯೇ ಮೋದಿ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದೆ.  ರಾಜಸ್ವ ಸಂಗ್ರಹ ಕೂಡ ಈ ಬಾರಿ ಹೆಚ್ಚಾಗಿದೆ. ಜಿಎಸ್‌ಟಿ ಸಂಗ್ರಹ ಶೇ 26ರಷ್ಟು ಹೆಚ್ಚಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹ, ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದು ಸಂತಸದ ವಿಚಾರ ಎಂದರು. 

ಬಜೆಟ್‌ನಲ್ಲಿ ಗೃಹಿಣಿಯರಿಗೆ ವಿಶೇಷ ಕೊಡುಗೆ ನೀಡಿದ್ದು, ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೆ ಘೋಷಣೆ ಮಾಡಿದ್ದಾರೆ. ಗೃಹಿಣಿಯರಿಗೆ ತಿಂಗಳಿಗೆ 500 ರೂಗಳ ಸಹಾಯಧನ ನೀಡುವ ಯೋಜನೆ ಇದಾಗಿದೆ. ಇದಲ್ಲದೇ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕೂಡ ಬಂಪರ್‌ ಗಿಫ್ಟ್‌ ದೊರೆತಿದ್ದು, ಫ್ರೀ ಬಸ್‌ ಪಾಸ್‌ ನೀಡುವುದಾಗಿ ತಿಳಿಸಿದ್ದಾರೆ. 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್ ಸೇವೆಯನ್ನು ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಿಸಿದರು.

ಇದನ್ನೂ ಓದಿ : Karnataka Budget 2023 Live: ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಬೊಮ್ಮಾಯಿ

ಪ್ರಧಾನಿ ಅವರು ಕರೆ ನೀಡಿರುವ ಮುಂದಿನ 25 ವರ್ಷಗಳ ಅಮೃತ ಕಾಲ ಗುರಿಯೊಂದಿಗೆ ಅಭಿವೃದ್ಧಿಪಥವನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡ ಈ ಬಜೆಟ್‌ ಮಂಡಿಸಿರುವುದುಆಗಿ ಸಿಎಂ ಬೊಮ್ಮಾಯಿ ಹೇಳಿದರು. ರಾಜ್ಯದ ಆರ್ಥಿಕತೆ ಕೋವಿಡ್ ಪೂರ್ವ ಮಟ್ಟ ತಲುಪಿದ್ದು, ಕೇಂದ್ರ ಸರ್ಕಾರದ ನೀತಿಗಳಿಂದ ಹಣದುಬ್ಬರ ನಿಯಂತ್ರಣ ಸಾಧ್ಯವಾಗಿದೆ ಎಂದರು. ಶೇ 7.9 ಆರ್ಥಿಕ ಬೆಳವಣಿಗೆ ಸಾಧಿಸಿದ್ದೇವೆ. ಸೇವೆ ಮತ್ತು ಕೈಗಾರಿಕಾ ವಲಯ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ಶಿಕ್ಷಣ, ಉದ್ಯೋಗ, ಸಬಲೀಕರಣ ಮಂತ್ರದೊಂದಿಗೆ, ದುರ್ಬಲ ವರ್ಗದವರಿಗೆ, ಎಸ್​​ಸಿ,ಎಸ್​ಟಿಗೆ ಬೆಂಬಲ, ಫಲಾನುಭವಿಗಳಿಗೆ ನೇರವಾಗಿ ಸವಲತ್ತು ನೀಡುವ ಮೂಲಕ ಪಾರದರ್ಶಕತೆ, ಶ್ರಮಿಕ ವರ್ಗದವರ ಬಗ್ಗೆಯೂ ಕಾಳಜಿ ವಹಿಸಿದ್ದೇವೆ ಎಂದರು ಸಿಎಂ ಸದನಕ್ಕೆ ತಿಳಿಸಿದರು.

ಇದನ್ನೂ ಓದಿ :Karnataka Budget 2023: ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ.!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News