ಸಿದ್ದರಾಮಯ್ಯ ಬಜೆಟ್ ರಾಜ್ಯದ ವಿನಾಶಕ್ಕೆ ಬುನಾದಿ ಹಾಕಿದ್ದಾರೆ : ಹೆಚ್‌ಡಿಕೆ 

ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.

Written by - Krishna N K | Last Updated : Feb 16, 2024, 03:51 PM IST
  • ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ.
  • ಓದುವಾಗಲೇ ಸಿದ್ದರಾಮಯ್ಯರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿತ್ತು.
  • ರಾಜ್ಯ ಬಜೆಟ್‌ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ.
ಸಿದ್ದರಾಮಯ್ಯ ಬಜೆಟ್ ರಾಜ್ಯದ ವಿನಾಶಕ್ಕೆ ಬುನಾದಿ ಹಾಕಿದ್ದಾರೆ : ಹೆಚ್‌ಡಿಕೆ  title=

ಬೆಂಗಳೂರು: ಇದು ಡಿಪಿಆರ್ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು. ಅಲ್ಲದೆ ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ:

ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ವಿಶ್ವಾಸ ಮೂಡುತ್ತಿಲ್ಲ: ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ರಾಜ್ಯದ ಇತಿಹಾಸದಲ್ಲಿ 15 ಬಜೆಟ್ ಗಳನ್ನು ಮಂಡಿಸುವವರು ಮುಂದೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇದೆ. ಆದರೆ, ಬಜೆಟ್ ನೋಡಿದರೆ ಯಾವುದೇ ರೀತಿಯ ವಿಶ್ವಾಸ ಮೂಡುತ್ತಿಲ್ಲ ಈ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಬಜೆಟ್ ಮೂಲಕ ರಾಜ್ಯದ ವಿನಾಶಕ್ಕೆ ಬುನಾದಿ: ಸರಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ. ಜನರು ಸಮೃದ್ದಿಯಾಗಿ ಖಜಾನೆ ತುಂಬಿಸಿದ್ದಾರೆ. ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಏಳು ಕೋಟಿ ಜನರ ಕಿವಿಗೆ ಹೂವು: ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಈಗ ಅದೇ ಹೂವನ್ನ 7 ಕೋಟಿ ಜನರ ಕಿವಿಗೆ ಇಟ್ಟಿದ್ದಾರೆ. ಈ ಬಜೆಟ್ ನೋಡಿದರೆ 'ನಾಳೆ ಬಾ ಸರಕಾರ ' ದಂತೆ ಕಾಣುತ್ತಿದೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರಕಾರಕ್ಕೆ ಅವರು ನಿತ್ಯವೂ ಬೈತಾರೆ. ಆದರೆ ಅದೇ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಅನ್ನುತ್ತಾರೆ. ಬಜೆಟ್ ಪುಸ್ತಕದ ಪ್ರತಿ ಪುಟದಲ್ಲಿಯೂ ಕೇಂದ್ರ ಸರಕಾರವನ್ನು  ಬೈದಿದ್ದಾರೆ. ಒಂದು ಸುಳ್ಳನ್ನು ಸತ್ಯ ಮಾಡಬೇಕಾದಾರೆ ನೂರು ಬಾರಿ ಸುಳ್ಳು ಹೇಳು ಎನ್ನುವ ಮಾತಿದೆ. ಅದೇ ಕೆಲಸವನ್ನು ಈಗ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಇಂತಹ ಕೆಟ್ಟ ಸರಕಾರ ಈ ದೇಶದಲ್ಲಿ ಯಾವತ್ತೂ ಬಂದಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಜನರ ಮೇಲೆ ಸಿಎಂಗೆ ಸಿಟ್ಟಿದೆ, ಬಜೆಟ್ ನಲ್ಲಿ ಅದು ಕಾಣುತ್ತಿದೆ: ನಾಡಿನ ಜನರ ಮೇಲೆ ಸಿದ್ದರಾಮಯ್ಯಗೆ ಆಕ್ರೋಶ ಇದ್ದಂತೆ ಇದೆ. ಆ ಸಿಟ್ಟನ್ನು ಬಜೆಟ್‌ನಲ್ಲಿ ತೋರಿಸಿದ್ದಾರೆ. ಇಷ್ಟೇ ಈ ಬಜೆಟ್ ನ ಸಾರಾಂಶ. ಅಷ್ಟೇ ಅಲ್ಲದೆ, ಸಿದ್ದರಾಮಯ್ಯಗೆ ಜೆಡಿಎಸ್, ಬಿಜೆಪಿ, ಕೇಂದ್ರದ ಮೇಲೆ ಇಷ್ಟು ದಿನ ಆಕ್ರೋಶ ಇತ್ತು ಅಂತ ಅಂದುಕೊಂಡಿದ್ದೆ. ಆದರೆ ಈ ಬಜೆಟ್ ನೋಡಿದರೆ ಸಿದ್ದರಾಮಯ್ಯ ಅವರಿಗೆ 7 ಕೋಟಿ ಕನ್ನಡಿಗರ ಮೇಲೆ ಆಕ್ರೋಶ ಇದೆ ಅಂತ ಅರ್ಥವಾಗುತ್ತದೆ ಎಂದರು ಕುಮಾರಸ್ವಾಮಿ ಅವರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News