ಬೆಂಗಳೂರು : 2023-24 ರ Karnataka Budget ನಲ್ಲಿ "ಅನುಗ್ರಹ" ಯೋಜನೆ ಜಾರಿ ಮಾಡಿಲಾಗಿದೆ. ಕಳೆದ ಸರ್ಕಾರ ಈ ಯೋಜನೆ ನಿರ್ಲಕ್ಷ ಮಾಡಲಾಗಿತ್ತು, ಇದು ರೈತ ವಿರೋಧಿ ಧೋರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದರು.


COMMERCIAL BREAK
SCROLL TO CONTINUE READING

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ಅನುಗ್ರಹ' ಯೋಜನೆಯನ್ನು ಪ್ರಾರಂಭಿಸಲಾಗಿತ್ತು.


ಆದರೆ, ಹಿಂದಿನ ಸರ್ಕಾರ ಅದನ್ನು ನಿರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ | ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು. ಪರಿಹಾರ ಒದಗಿಸಲಾಗುವುದು.


ಇದನ್ನೂ ಓದಿ: Karnataka Budget 2023-24: ಶಾಲಾ ಶಿಕ್ಷಣಕ್ಕೆ ಉತ್ತೇಜನ ನೀಡಿದ ಸಿಎಂ ಸಿದ್ದು ಬಜೆಟ್ 


ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಎಂಬ ಶ್ರೇಷ್ಠತೆ ಧೈಯವಾಕ್ಯ ಹೊಂದಿರುವ 'ನಂದಿನಿ'ಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ.


ಇದನ್ನೂ ಓದಿ: Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?


ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇ 5 ರಿಂದ 7 ರಷ್ಟು ಇಳಿಕೆಯಾಗಿರುತ್ತದೆ. ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.