Karnataka budget 2023 : ಬೊಮ್ಮಾಯಿ ಬಜೆಟ್ ನಲ್ಲಿ  ಮೀನುಗಾರರಿಗೆ ಆದ್ಯತೆ ನೀಡಲಾಗಿದೆ. ಮೀನುಗಾರರಿಗೆ ಆದ್ಯತೆ ನೀಡುವ ಉದ್ದೇಶದಿಂದ 10,000 ವಸತಿರಹಿತ ಮೀನುಗಾರರಿಗೆ ವಸತಿ ನಿರ್ಮಾಣ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಘೋಷಿಸಲಾಗಿದೆ. 


COMMERCIAL BREAK
SCROLL TO CONTINUE READING

ಮತ್ಸ ಸಿರಿ ಯೋಜನೆ :
ಆಳಸಮುದ್ರ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಮತ್ಸ ಸಿರಿ ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ  ಈ ಯೋಜನೆಯನ್ನು ರೂಪಿಸಲಾಗಿದೆ. 


ಇದನ್ನೂ ಓದಿ : Karnataka Budget 2023 : ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ, ಥೀಮ್ ಪಾರ್ಕ್ ನಿರ್ಮಾಣ


ದೋಣಿಗಳ ಪತ್ತೆಗೆ GPS ಸಂವಹನ :
ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ GPS ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಈ ಮೂಲಕ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ. ಈ ಯೋಜನೆಗಾಗಿ  17 ಕೋಟಿ ರೂ. ಗಳನ್ನು ವ್ಯಯಿಸಲಾಗುವುದು. 


ಮೀನುಗಾರರಿಗೆ ಕಿಸಾನ್‌ ಕ್ರೆಡಿಟ್ ಕಾರ್ಡ್ ವಿತರಣೆ: 
FFPO ಗಳ ಸ್ಥಾಪನೆ ಹಾಗೂ 12,175 ಮೀನುಗಾರರಿಗೆ ಕಿಸಾನ್‌ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ  ಕೈಗೊಳ್ಳಲಾಗಿದೆ. ಸಾಂಪ್ರದಾಯಿಕ ಮೀನುಗಾರರ ಜೀವವನ್ನು ಉತ್ತಮ ಪಡಿಸಲು ಕರಾವಳಿಯ ವಿವಿಧ ಸ್ಥಳಗಳಲ್ಲಿ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ಕೃತಕ ಬಂಡೆ ಸಾಲುಗಳನ್ನು ಸ್ಥಾಪಿಸಲಾಗುವುದು. ಸಿಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸುವ ಉದ್ದೇಶದಿಂದ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ.  


ಇದನ್ನೂ ಓದಿ : Karnataka Budget 2023 : ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ


ಉತ್ತರ ಕರ್ನಾಟಕದಲ್ಲಿಯೂ ಮೀನು ಕೃಷಿ  :
ಉತ್ತರ ಕರ್ನಾಟಕದಲ್ಲಿ ಮೀನು ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ  ಹಾವೇರಿಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ನೆರವಾಗುವಂತೆ ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಒದಗಿಸಲಾಗುವುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.