Karnataka Budget 2023 : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ನಿರೀಕ್ಷೆಯಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿ ಘೋಷಣೆ ಮಾಡಿದ್ದಾರೆ. ಅತಿಥಿ ಉಪನ್ಯಾಸಕರು, ಗ್ರಾ.ಪಂ ಸದ್ಯರು, ಮೇಲ್ವಿಚಾರಕರು, ಬಿಸಿಯೂಟ ಸಹಾಯಕರುಗೌರವ ಧನವನ್ನು 1000 ರೂ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಇದಕ್ಕಾಗಿ ಒಟ್ಟಾರೆ 4.45 ಜನರಿಗೆ 775 ಕೋಟಿ ಬಿಡುಗಡೆ ಮಾಡಲಾಗಿದೆ.
ಸಮಾಜದ ಏಳಿಗೆಗಾಗಿ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಕಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರಿಗೆ ನೀಡುವ ಮಾಸಿಕ ಗೌರವಧನ 1000 ರೂಪಾಯಿ ಹೆಚ್ಚಳ ಮಾಡಿ ದ್ದಾರೆ.
ಇದನ್ನೂ ಓದಿ : Karnataka Budget 2023 : ಬೊಮ್ಮಾಯಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ
ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ :
ಇನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. ರೈತ ವಿದ್ಯಾನಿಧಿಯನ್ನು ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ, ಆಟೋ ಚಾಲಕರ ಮಕ್ಕಳಿಗೆ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಮೂರು ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ 141 ಕೋಟಿ ನೀಡಲಾಗಿದೆ.
ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳಿಗೆ ಬಂಪರ್ :
ವಿದ್ಯಾಶಕ್ತಿ ಯೋಜನೆಯ ಮೂಲಕ ಪಿಯುಸಿ, ಡಿಗ್ರಿ ಕಾಲೇಜ್ ವಿದ್ಯಾರ್ಥಿಗಳಿಗೆ ಬಂಪರ್
ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಮೂಲಕ ಎಂಟು ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ : Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.