Karnataka Budget 2023: 77,000 ಸಾವಿರ ಕೋಟಿ ರೂ. ಸಾಲ ಪ್ರಸ್ತಾವನೆ

Karnataka Budget 2023: ಕಳೆದ ವರ್ಷಗಿಂತಲೂ ಹೆಚ್ಚಿನ ಸಾಲ‌ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ‌ ಸರ್ಕಾರ ಒಟ್ಟು 77,750 ಕೋಟಿ ರೂ. ಸಾಲದ ಹೊರೆ ಹಾಕಲಿದೆ.

Written by - RACHAPPA SUTTUR | Edited by - Puttaraj K Alur | Last Updated : Feb 17, 2023, 01:10 PM IST
  • ಸಿಎಂ ಬೊಮ್ಮಾಯಿ‌ ಸರ್ಕಾರ 2023-24ನೇ ಸಾಲಿನಲ್ಲಿ ಮತ್ತೆ ಬೃಹತ್ ಪ್ರಮಾಣದ ಸಾಲದ ಮೊರೆ ಹೋಗಿದೆ
  • ಕಳೆದ ವರ್ಷಗಿಂತಲೂ ಹೆಚ್ಚಿನ ಸಾಲ‌ ಮಾಡಲಿದ್ದು, ಒಟ್ಟು 77,750 ಕೋಟಿ ರೂ. ಸಾಲದ ಹೊರೆ ಹಾಕಲಿದೆ
  • ಈ ಮೂಲಕ 2023-24ರ ಕೊನೆಯಲ್ಲಿ ರಾಜ್ಯದ ಒಟ್ಟು ಹೊಣೆಗಾರಿಕೆ 5,64,896 ಕೋಟಿ ರೂ.ಗೆ ಏರಿಕೆಯಾಗಲಿದೆ
Karnataka Budget 2023: 77,000 ಸಾವಿರ ಕೋಟಿ ರೂ. ಸಾಲ ಪ್ರಸ್ತಾವನೆ title=
Karnataka Budget 2023

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ‌ ಸರ್ಕಾರ 2023-24ನೇ ಸಾಲಿನಲ್ಲಿ ಮತ್ತೆ ಬೃಹತ್ ಪ್ರಮಾಣದ ಸಾಲದ ಮೊರೆ ಹೋಗಿದೆ. ಕಳೆದ ವರ್ಷಗಿಂತಲೂ ಹೆಚ್ಚಿನ ಸಾಲ‌ ಮಾಡಲಿರುವ ಬೊಮ್ಮಾಯಿ ಸರ್ಕಾರ ಒಟ್ಟು 77,750 ಕೋಟಿ ರೂ. ಸಾಲದ ಹೊರೆ ಹಾಕಲಿದೆ.

ಆ ಮೂಲಕ 2023-24ರ ಕೊನೆಯಲ್ಲಿ ರಾಜ್ಯದ ಒಟ್ಟು ಹೊಣೆಗಾರಿಕೆ 5,64,896 ಕೋಟಿ ರೂ.ಗೆ ಏರಿಕೆಯಾಗಲಿದೆ. ಕಳೆದ ವರ್ಷ ಬೊಮ್ಮಾಯಿ ಸರ್ಕಾರ ಅಂದಾಜು 72,000 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿತ್ತು. ಬಳಿಕ‌ ಅದನ್ನು 61,000 ರೂ.ಗೆ ಪರಿಷ್ಕರಿಸಲಾಗಿತ್ತು. ಆದರೆ ಈ ಬಾರಿ ಬೊಮ್ಮಾಯಿ ಸರ್ಕಾರ ಬರೋಬ್ಬರಿ 77,750 ಕೋಟಿ ರೂ. ಸಾಲ ಮಾಡಲು ಮುಂದಾಗಿದೆ. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ 6,254 ಕೋಟಿ ರೂ.‌ಸಾಲ, ಬಹಿರಂಗ ಮಾರುಕಟ್ಟೆಯಿಂದ 70,295 ಕೋಟಿ ರೂ‌. ಸಾಲ ಮಾಡಲು ನಿರ್ಧರಿಸಿದೆ. ಆ ಮೂಲಕ ಬರೋಬ್ಬರಿ 77,750 ಕೋಟಿ ರೂ. ಸಾಲ ಮಾಡಲು ಮುಂದಾಗಿದೆ.

ಇದನ್ನೂ ಓದಿ: Karnataka Budget 2023 : ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ, ಥೀಮ್ ಪಾರ್ಕ್ ನಿರ್ಮಾಣ

2022-23ರ ಪರಿಷ್ಕೃತ ಅಂದಾಜುಗಳ ಅನ್ವಯ ಆಯವ್ಯಯದಲ್ಲಿ ಅಂದಾಜಿಸಲಾದ 2,61,977 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಒಟ್ಟಾರೆ ಜಮೆ 2,79,540 ಕೋಟಿ ರೂ.ಗಳಾಗಿದೆ. ರಾಜ್ಯ ರಾಜಸ್ವ ಕ್ರೋಡೀಕರಣ 2,12,360 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸ್ವಂತ ತೆರಿಗೆ ರಾಜಸ್ವ ಸಂಗ್ರಹಣೆ ಜಿಎಸ್‍ಟಿ ಪರಿಹಾರ ಒಳಗೊಂಡಂತೆ 1,54,431 ಕೋಟಿ ರೂ.ಗಳಾಗಿದೆ‌. ಪರಿಷ್ಕೃತ ಅಂದಾಜಿನ ಪ್ರಕಾರ ಒಟ್ಟು ವೆಚ್ಚ 2,89,653 ಕೋಟಿ ರೂ.ಗಳಾಗಿದೆ. ಇದು ಆಯವ್ಯಯ ಅಂದಾಜು 2,65,720 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಶೇ.9ರಷ್ಟು ಹೆಚ್ಚಳ ಕಂಡಿದೆ.

2023-24ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವ 1,64,653 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 11,000 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Karnataka budget 2023 : ಮೀನುಗಾರಿಕೆ ಇಲಾಖೆಗೆ ಬಂಪರ್ : ಮೀನುಗಾರರಿಗೆ 10 ಸಾವಿರ ಮನೆಗಳ ನಿರ್ಮಾಣ

23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ.ಗಳ ಸಾಲಗಳ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,03,910 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. 2,25,507 ಕೋಟಿ ರೂ.ಗಳ ರಾಜಸ್ವ ವೆಚ್ಚ, 61,234 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚ 3,09,182 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

ಹೆಚ್ಚುವರಿ ಆದಾಯದ ಬಜೆಟ್

ಕೋವಿಡ್ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ರಾಜಸ್ವ ಸ್ವೀಕೃತಿಯು ರಾಜಸ್ವ ವೆಚ್ಚಕ್ಕಿಂತ 402 ಕೋಟಿ ರೂ.ಗಳ ಹೆಚ್ಚುವರಿಯನ್ನು ಅಂದಾಜು ಮಾಡಲಾಗಿದೆ. ಆ ಮೂಲಕ ಬೊಮ್ಮಾಯಿ ಸರ್ಕಾರ 2 ವರ್ಷಗಳ ಆದಾಯ ಕೊರತೆಯ ಬಜೆಟ್ ನಿಂದ ಹೊರ ಬಂದಿದ್ದಾರೆ. ಈ  ಬಾರಿ 402 ಕೋಟಿ ರೂ.ನ ಹೆಚ್ಚುವರಿ ಆದಾಯದ (Revenue surplus) ಬಜೆಟ್ ಮಂಡನೆ ಮಾಡಿದ್ದಾರೆ. ವಿತ್ತೀಯ ಕೊರತೆ 60,581 ಕೋಟಿ ರೂ.ಗಳಾಗುತ್ತದೆಂದು ನಿರೀಕ್ಷಿಸಲಾಗಿದೆ. ಅದು GSDPಯ ಶೇ.2.60ರಷ್ಟಾಗಿರುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News