Karnataka Budget 2023:1-10 ತರಗತಿ ಮಕ್ಕಳಿಗೆ ಸಿಹಿ ಸುದ್ದಿ, ಇನ್ಮುಂದೆ ಸಿಗಲಿದೆ ಮೊಟ್ಟೆ-ಬಾಳೆಹಣ್ಣು
Karnataka Budget 2023: ಸರ್ಕಾರಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 2 ದಿನ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು. ಸುಮಾರು 60 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2023-2024ನೇ ಸಾಲಿನ ಬಜೆಟ್ ಮಂಡಿಸಿದರು. ದಾಖಲೆಯ 14ನೇ ಬಜೆಟ್ ಮಂಡಿಸಿದ ಅವರು, ಹೊಸ ಯೋಜನೆಗಳು ಸೇರಿದಂತೆ ಕೃಷಿ, ಶಿಕ್ಷಣ, ಮಹಿಳೆಯರ ಸಬಲೀಕರಣ, ಆರೋಗ್ಯ ಹೀಗೆ ಹಲವಾರು ಕ್ಷೇತ್ರಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ.
ಬಜೆಟ್‌ನಲ್ಲಿ ಅಬಕಾರಿ ಶುಲ್ಕದಲ್ಲಿ ಶೇ.20ರಷ್ಟು ಹೆಚ್ಚಳ ಮಾಡಿದ್ದು, ಬಿಯರ್ ಮೇಲಿನ ಅಬಕಾರಿ ಶುಲ್ಕವನ್ನು ಶೇ.10ರಷ್ಟು ಏರಿಸಲಾಗಿದೆ. ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ ಘೋಷಿಸಲಾಗಿದ್ದು, ಈ ಮೂಲಕ ಅನುಗ್ರಹ ಯೋಜನೆ ಜಾರಿ ಮಾಡಲಾಗಿದೆ. ನಮ್ಮ ಮೆಟ್ರೋಗೆ 30 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‍ನ 5 ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಅಂತಾ ಹೇಳಿದರು. ಇದರ ಜೊತೆಗೆ ಇಂದಿರಾ ಕ್ಯಾಂಟಿನ್‍ಗೆ 100 ಕೋಟಿ ರೂ. ನಿಗದಿಪಡಿಸಿದ್ದಾರೆ. ಬಜೆಟ್‍ನಲ್ಲಿ ಸಿಲಿಕಾಣ್ ಸಿಟಿ ಬೆಂಗಳೂರಿಗೆ ಅತಿಹೆಚ್ಚು ಹಣವನ್ನು ನೀಡಿದ್ದು, ಬರೋಬ್ಬರಿ 45,000 ಕೋಟಿ ರೂ. ಘೋಷಿಸಿದ್ದಾರೆ. ಮೆಟ್ರೋ, ಬೆಂಗಳೂರು ಉಪನಗರ ರೈಲಿಗೆ ಸೇರಿದಂಥೆ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಈ ಅನುದಾನ ಮೀಸಲಿಡಲಾಗಿದೆ.
ಇದನ್ನೂ ಓದಿ: ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ
ಇದೇ ವೇಳೆ ಆಸ್ತಿ ನೋಂದಣಿ, ಮುಂದ್ರಾಂಕ ಸುಂಕವನ್ನು ಕೂಡ ಹೆಚ್ಚಳ ಮಾಡಲಾಗಿದೆ. ರೇಶ್ಮೆ ಬೆಳೆಗಾರರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ಘೋಷಿಸಲಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರದ APMC ಕಾಯ್ದೆ ವಾಪಸ್ ಪಡೆದುಕೊಳ್ಳಲಾಗುವುದು ಎಂದ ಸಿದ್ದರಾಮಯ್ಯ, ಇದು ರೈತರಿಗೆ ನೆರವಾಗಲಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆ ರೈತರಿಗೆ ಮೋಸ ಮಾಡಲಿದೆ ಅಂತ ಕಿಡಿಕಾರಿದರು.
ಮಕ್ಕಳಿಗೆ ಮೊಟ್ಟೆ-ಬಾಳೆಹಣ್ಣು ವಿತರಣೆ
ಸರ್ಕಾರಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 2 ದಿನ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಮಾರು 60 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.