Karnataka Budget 2023 : ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ, ಥೀಮ್ ಪಾರ್ಕ್ ನಿರ್ಮಾಣ

Karnataka Budget 2023 : ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ 'ಶ್ರೀ ಭುವನೇಶ್ವರಿ' ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಆಯವ್ಯಯದಲ್ಲಿ ಘೋಷಣೆ ಮಾಡಿದರು.

Written by - Prashobh Devanahalli | Edited by - Chetana Devarmani | Last Updated : Feb 17, 2023, 12:25 PM IST
  • ಕರ್ನಾಟಕ ಬಜೆಟ್‌ 2023 ಮಂಡಿಸುತ್ತಿರುವ ಸಿಎಂ
  • ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ
  • ಬೆಂಗಳೂರು ನಗರದಲ್ಲಿ ಥೀಮ್ ಪಾರ್ಕ್ ನಿರ್ಮಾಣ
Karnataka Budget 2023 : ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ, ಥೀಮ್ ಪಾರ್ಕ್ ನಿರ್ಮಾಣ title=
Karnataka Budget 2023

ಬೆಂಗಳೂರು : ಇಂದು ಸಿಎಂ ಬೊಮ್ಮಾಯಿ 2023-24ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಂಡಿಸಿದ್ದಾರೆ. ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದು, ಆರಂಭದಲ್ಲಿಯೇ ಪ್ರಧಾನಿ ಮೋದಿ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದ್ದು, ರಾಜಸ್ವ ಸಂಗ್ರಹ ಕೂಡ ಈ ಬಾರಿ ಹೆಚ್ಚಾಗಿದೆ ಎಂದು ಸಿಎಂದ ಹೇಳಿದರು.

ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ 'ಶ್ರೀ ಭುವನೇಶ್ವರಿ' ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಆಯವ್ಯಯದಲ್ಲಿ ಘೋಷಣೆ ಮಾಡಿದರು. ʻನಮ್ಮ ಜಿಲ್ಲೆ ನಮ್ಮ ಸಂಸ್ಕೃತಿʼ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದರು.

ಇದನ್ನೂ ಓದಿ : Karnataka Budget 2023: ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ.! ಏನಿದರ ತಾತ್ಪರ್ಯ?

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ 

ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ರವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗುವುದು. ಕರ್ನಾಟಕ ಜಗತ್ತಿನೆಲ್ಲೆಡೆ ಒಂದು ಶಕ್ತಿಯಾಗಿ ಹೊರ ಹೊಮ್ಮುತ್ತಿದ್ದು, ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಹೆಮ್ಮೆಯ ಕನ್ನಡಿಗರನ್ನು ಒಳಗೊಂಡ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು.

ನಾಡು ನುಡಿ ಸಂಸ್ಕೃತಿ ಕುರಿತು ಅಮೂಲ್ಯ ಕೃತಿಗಳನ್ನು ಪ್ರಕಟಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ 2 ಕೋಟಿ ರೂ. ನೆರವು ನೀಡಲಾಗುವುದು. ದೇಶವನ್ನು ಆಳಿದ ಗಂಗ, ಕದಂಬ, ರಾಷ್ಟ್ರಕೂಟ, ಚಾಲುಕ್ಯ, ಹೊಯ್ಸಳ ಮತ್ತಿತರರ ಕನ್ನಡ ರಾಜವಂಶಗಳ ಇತಿಹಾಸ ಹಾಗೂ ಕೊಡುಗೆಗಳ ಬಗ್ಗೆ ಕನ್ನಡ ವಿಶ್ವವಿದ್ಯಾಲಯ ವತಿಯಿಂದ ಅಧ್ಯಯನ ಮಾಡಲಾಗುವುದು.

ಇದನ್ನೂ ಓದಿ : Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News