Karnataka Budget 2023 : 2023-24ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದೆ. ವೆಚ್ಚಕ್ಕಿಂತ ಆದಾಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿಯ ಬಜೆಟ್ ನಲ್ಲಿ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ ಮಾಡಿದ್ದಾರೆ ನೋಡೋಣ.
ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ :
ಶಿಕ್ಷಣ: 37960 ಕೋಟಿ
ಜಲಸಂಪನ್ಮೂಲ: 22854 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 20494 ಕೋಟಿ
ನಗರಾಭಿವೃದ್ಧಿ: 17938 ಕೋಟಿ
ಕಂದಾಯ: 15943 ಕೋಟಿ
ಆರೋಗ್ಯ: 15151 ಕೋಟಿ
ಒಳಾಡಳಿತ ಮತ್ತು ಸಾರಿಗೆ:14509 ಕೋಟಿ
ಇಂಧನ: 13803 ಕೋಟಿ
ಸಮಾಜ ಕಲ್ಯಾಣ: 11163 ಕೋಟಿ
ಲೋಕೋಪಯೋಗಿ: 10741 ಕೋಟಿ
ಕೃಷಿ ಮತ್ತು ತೋಟಗಾರಿಕೆ: 9456 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 5676 ಕೋಟಿ
ಆಹಾರ ಮತ್ತು ನಾಗರೀಕ ಸರಬರಾಜು: 4600 ಕೋಟಿ
ವಸತಿ: 3787 ಕೋಟಿ
ಇತರೆ: 116968 ಕೋಟಿ
ಇದನ್ನೂ ಓದಿ : Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್
ಮಕ್ಕಳ ಬಸ್ಸು ಯೋಜನೆ ಪ್ರಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ. ಉಚಿತ ಬಸ್ಸು ಪಾಸ್ ಸೌಲಭ್ಯ ಘೋಷಣೆ ಮಾಡಿರುವ ಸರ್ಕಾರ ವಿದ್ಯಾವಾಹಿನಿ ಯೋಜನೆ ಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ಸು ಪಾಸ್ ಸೌಲಭ್ಯ ನೀಡುವುದಾಗಿ ಹೇಳಿದ್ದಾರೆ. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ ವಾಗಲಿದೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ : Karnataka Budget 2023: ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ.! ಏನಿದರ ತಾತ್ಪರ್ಯ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.