Karnataka Budget 2023: ಹಿಂದುಳಿದ ವರ್ಗಗಳು-ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬೊಮ್ಮಾಯಿ ಕೊಡುಗೆ ಏನು?

Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.  

Written by - Nitin Tabib | Last Updated : Feb 17, 2023, 01:59 PM IST
  • ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾದ ಈ ಬಜೆಟ್ ನಲ್ಲಿ
  • ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
  • 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಸರ್ಪ್ಲಸ್ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ.
Karnataka Budget 2023: ಹಿಂದುಳಿದ ವರ್ಗಗಳು-ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬೊಮ್ಮಾಯಿ ಕೊಡುಗೆ ಏನು? title=
ಕರ್ನಾಟಕ ಬಜೆಟ್ 2023 ಮುಖ್ಯಾಂಶಗಳು

Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾದ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ. 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಸರ್ಪ್ಲಸ್ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ವಿವಿಧ 11 ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿರುವ ಅನುದಾನವನ್ನು ರೂ.596 ಕೋಟಿ ರೂಗಳಿಗೆ ಹೆಚ್ಚಿಸಲಾಗಿದೆ.

ಹಿಂದುಳಿತ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಬಜೆಟ್ ಕೊಡುಗೆ
>>ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಗಳಲ್ಲಿ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾ ಬಲ 2500 ಹೆಚ್ಚಳ.

>> ಅಲ್ಪಸಂಖ್ಯಾತರ ನಿರ್ದೆಹ್ಸ್ನಾಲಯದ ಅಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಆತ್ಮರಕ್ಷಣೆ ತರಬೇತಿಗೆ 2 ಕೋಟಿ ರೂ. ಅನುದಾನ

>> ವಿಶ್ವದ ಟಾಪ್ 250 ವಿಶ್ವವಿದ್ಯಾಲಯ ಮತ್ತು ಸ್ನಾತಕೊತ್ತರ ವ್ಯಾಸಂಗ ಮಾಡಲು ಇಚ್ಚಿಸುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ.ನಂತೆ ಶೂನ್ಯ ಬಡ್ಡಿದರದಲ್ಲಿ ಸಹಾಯ ಧನ ನೀಡಲಾಗುವುದು.

>> ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪದವಿಧರ ಮಹಿಳೆಯರಿಗೆ ಉತ್ತಮ ಉದ್ಯೋಗಾವಕಾಶ ಮತ್ತು ಸ್ವಂತ ಉದ್ದಿಮೆ ಪ್ರಾರಂಭಿಸಲು ಪ್ರೋತ್ಸಾಹಣ ನೀಡುವ ಉದ್ದೇಶದಿಂದ ಐಐಎಂಬಿ ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ 3 ಕೋಟಿ ರೂ.ವೆಚ್ಚದಲ್ಲಿ ತರಬೇತಿ.

>> ವಕ್ಫ್ ಆಸ್ತಿಗಳ ಸಂರಕ್ಷಣೆ, ಅಭಿವೃದ್ಧಿಗೆ 10 ಕೋಟಿ ಮತ್ತು ಖಬರಿಸ್ತಾನ್ ಅಭಿವೃದ್ಧಿಗೆ 10 ಕೋಟಿ ಅನುದಾನ.

ಇದನ್ನೂ ಓದಿ-Karnataka Budget 2023: ಈ ಬಾರಿಯ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ-ಪಂಗಡದವರಿಗೆ ಸಿಕ್ಕಿದ್ದೇನು?

>> ಅತಿ ಹಿಂದುಳಿದ ಅಲ್ಪಸಂಖ್ಯಾತ ಪಿಂಜಾರ್, ದರ್ವೆಸು ಮತ್ತು ನದಾಫ್ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ.

ಇದನ್ನೂ ಓದಿ-Karnataka Budget 2023: ಈ ಬಾರಿಯ ಬಜೆಟ್ ನಲ್ಲಿ ಯಾವ ಇಲಾಖೆಗೆ ಸಿಕ್ಕಿದೆಷ್ಟು?

>> ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅನುದಾನವನ್ನು 60 ಕೋಟಿ ಯಿಂದ 110 ಕೋಟಿಗೆ ಹೆಚ್ಚಳ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News