Karnataka Budget 2023 : 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲಿಗೆ ಈ ಬಾರಿಯ ಬಜೆಟ್ ಬಹಳ ಪ್ರಾಮುಖ್ಯತೆ ಪಡೆದಿದೆ. ಇದು ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಆಗಿರಲಿದೆ. ವಿಧಾನ ಸಭೆಯ ಚುನಾವಣೆ ಹೊಸ್ತಿಲಲ್ಲಿರುವ ಹಿನ್ನೆಲೆಯಲ್ಲಿ ಜನರ ನಿರೀಕ್ಷೆಗಳು ಕೂಡಾ ಹೆಚ್ಚಿವೆ. ಇದು ಬೊಮ್ಮಾಯಿ ಮಂಡಿಸುತ್ತಿರುವ ಎರಡನೇ ಬಜೆಟ್ ಮತ್ತು ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್.
ವಿಧಾನಸಭಾ ಚುನಾವಣೆ ತೀರಾ ಸನಿಹದಲ್ಲಿರುವ ಕಾರಣ ಈ ಬಾರಿ ಮುಖ್ಯಮಂತ್ರಿಗಳು ಮತದಾರರ ಒಲೈಕೆಯತ್ತ ಗಮನ ಹರಿಸುತ್ತಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ. ರೈತರು, ಬಡವರು, ಮಹಿಳೆಯರು ಹಾಗೂ ಸಾಮಾನ್ಯ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಸಿಎಂ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ : Karnataka Budget 2023 : ರಾಜ್ಯ ಬಜೆಟ್ ಸಿದ್ಧತೆಯಿಂದ ಮಂಡನೆವರೆಗೆ ಈ 10 ವಿಚಾರ ನಿಮಗೆ ಗೊತ್ತೇ.!?
ಇಂದು ಬೆಳಿಗ್ಗೆ 10.15ಕ್ಕೆ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆ ನಡೆಸಿ, ಬಜೆಟ್ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್ ಮಂಡನೆ ಬಳಿಕ ಮಧ್ಯಾಹ್ನ 2 ಗಂಟೆಗೆ ಸಿಎಂ ಸುದ್ದಿಗೋಷ್ಠಿ ನಡೆಯಲಿದೆ.
ಇದನ್ನೂ ಓದಿ : Karnataka Budget 2023: ಈ ಬಾರಿಯ ಬಜೆಟ್ ಜನಪರ ಆಗಿರಲಿದೆಯಾ? ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆಗಳೇನು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.