Karnataka Budget 2023: ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
Karnataka Budget 2023: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು: ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿ ಈ ಘೋಷಣೆ ಮಾಡಿದ್ದಾರೆ.
ದಾಖಲೆಯ 14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯನವರು, ರೈತರು ಮತ್ತು ಕೃಷಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಅದರಂತೆ ರೈತರ ಸಾಲದ ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷದಿಂದ 15 ಲಕ್ಷ ರೂ.ಗೆ ಏರಿಸಿದ್ದಾರೆ. ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಅಂತಾ ತಿಳಿಸಿದ್ದಾರೆ.
ಇದನ್ನೂ ಓದಿ: ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ
75 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಅನುಗ್ರಹ ಯೋಜನೆಯನ್ನು ಮರು ಜಾರಿ ಮಾಡಿ ಕುರಿ, ಮೇಕೆ, ಹಸು & ಎಮ್ಮೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು ಅಂತಾ ಹೇಳಿದ್ದಾರೆ.
ಎತ್ತಿನ ಹೊಳೆ ಯೋಜನೆಗೆ 22,252 ಕೋಟಿ ರೂ. ಮೀಸಲು
ಹಿಂದಿನ ಬಿಜೆಪಿ ಸರ್ಕಾರದ ನೀರಾವರಿ ಯೋಜನೆಯನ್ನು ‘ಕೈ’ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂ. ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ರೂ. ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.