Karnataka Budget 2025: ಕರ್ನಾಟಕ ಬಜೆಟ್ 2025, ದಾಖಲೆಯ 16ನೇ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಮಹಿಳೆಯರಿಗೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.
ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತ್ವರಿತ ಸಾಲ:
ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ "ಅಕ್ಕ ಕೋ-ಆಪರೇಟಿವ್ ಸೊಸೈಟಿ" ಸ್ಥಾಪಿಸಲಾಗುವುದು. ಜೊತೆಗೆ 'ಗೃಹಲಕ್ಷ್ಮಿ' ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯಮಟ್ಟದ 'ಅಕ್ಕ ಕೋ-ಆಪರೇಟಿವ್ ಸೊಸೈಟಿ' ವ್ಯಾಪ್ತಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದನ್ನೂ ಓದಿ- Karnataka Budget: ಪಂಚ ಗ್ಯಾರಂಟಿಗಳು, ಕಲ್ಯಾಣ ಕಾರ್ಯಕ್ರಮಗಳು ಉಚಿತ ಕೊಡುಗೆಗಳಲ್ಲ... ಬಜೆಟ್‌ನಲ್ಲಿ 6 ಅಭಿವೃದ್ಧಿಯ ಆಯಾಮ..!
ವಾತ್ಸಲ್ಯ ಕೇಂದ್ರಗಳ ಸ್ಥಾಪನೆ:
ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶ್ ಪಾಲನೆಗಾಗಿ 'ವಾತ್ಸಲ್ಯ ಕೇಂದ್ರ'ಗಳನ್ನು ಸ್ಥಾಪಿಸಲಾಗುವುದು. ತಜ್ಞ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುತ್ತಿರುವ ಬಡ ರೋಗಿಗಳು ಅವರ ಆರೈಕೆದಾರತಿಗೆ ವಿಶ್ರಾಂತಿ ಗೃಹಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ಇಂದಿರಾ ಕ್ಯಾಂಟೀನ್ಗಳಲ್ಲೂ ಮಹಿಳೆಯರಿಗೆ ಆದ್ಯತೆ:
ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ಇಂದಿರಾ ಕ್ಯಾಂಟೀನ್ ಗಳ ನಿರ್ವಹಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಪ್ರಾಯೋಗಿಕವಾಗಿ 10 ನಗರ ಪ್ರದೇಶಗಳಲ್ಲಿ ಈ ವ್ಯವಸ್ಥೆ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ- Karnataka Budget: ಕೃಷಿಕರಿಗೆ 'ರೈತ' ರಾಮಯ್ಯ ಕೃಪಾಕಟಾಕ್ಷ
ಮಹಿಳಾ ಸಬಲೀಕರಣಕ್ಕಾಗಿ ಗ್ರಾಮ ಪಂಚಾಯತಿ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಕೆಲವು ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ. ಅವು ಈ ಕೆಳಕಂಡಂತಿವೆ:-
* ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕಚೇರಿ ಆವರಣಗಳಲ್ಲಿ 'ಅಕ್ಕ ಕೆಫೆ ಮತ್ತು ಕ್ಯಾಂಟೀನ್' ಸ್ಥಾಪನೆ.
* ಶಾಲೆ, ಅಂಗನವಾಡಿ ಮತ್ತು ವಸತಿ ನಿಯಲಗಳಿಗೆ ಮೊಟ್ಟೆ ಮತ್ತು ತರಕಾರಿ ಪೂರೈಸಲು ಸ್ವ-ಸಹಾಯ ಸಂಘಗಳ 'ಕಿರು ಉದ್ಯಮ'ಗಳಿಗೆ ಪ್ರೋತ್ಸಾಹ.
* ಸ್ವ-ಸಹಾಯ ಸಂಘಗಳ ಮೂಲಕ ಪ್ರತಿ ಜಿಲ್ಲೆಯಲ್ಲಿ ಒಂದು 'ಸಮುದಾಯ ಪ್ರವಾಸಿ ಯೋಜನೆ' ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









