Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರೈತಾಪಿ ವರ್ಗಕ್ಕೆ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ರಾಜ್ಯದ ರೈತರ ಅಭ್ಯುದಯಕ್ಕಾಗಿ ಹಲವಾರು ಕೃಷಿ ಕಾರ್ಯಕ್ರಮಗಳನ್ನು ಘೋಷಿಸಿರುವ ಸಿದ್ದರಾಮಯ್ಯ, ಕೃಷಿ ಯಾಂತ್ರೀಕರಣಕ್ಕೆ ₹428 ಕೋಟಿ ಅನುದಾನದ ಭರವಸೆ ನೀಡಿದ್ದಾರೆ. ಇದರಿಂದ 50 ಸಾವಿರ ರೈತರಿಗೆ ಅನುಕೂಲವಾಗಲಿದೆ. 81 ಲಕ್ಷ ರೈತರಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಸ್ಥಾಪಿಸಲು ₹440 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.
ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು ಎಂದು ಸಿಎಂ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
ಇದನ್ನೂ ಓದಿ- ಸಿದ್ದರಾಮಯ್ಯ ಬಜೆಟ್: ಇಲಾಖಾವಾರು ಅನುದಾನ ಹಂಚಿಕೆ... ಈ ಇಲಾಖೆಗೆ 'ಸಿಂಹ ಪಾಲು'..!
ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000 ಕೃಷಿ ಹೊಂಡಗಳನ್ನು ನಿರ್ಮಿಸಲು ಸರ್ಕಾರ ಕ್ರಮ ಕೈಗೊಲ್ಲಿದೆ.
ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









