ಕರ್ನಾಟಕ ಬಜೆಟ್ 2023 ಲೈವ್ ಅಪ್‌ಡೇಟ್‌ಗಳು: ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 2ನೇ ಬಜೆಟ್ ಆಗಿದ್ದು, ಪ್ರಸಕ್ತ ಅವಧಿಯಲ್ಲಿ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಆಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಸಿಎಂ ಬೊಮ್ಮಾಯಿ ಕಲ್ಯಾಣ ಯೋಜನೆಗಳು ಮತ್ತು ಹಲವಾರು ಪ್ರಮುಖ ಸಮುದಾಯಗಳ ಬೇಡಿಕೆಗಳ ಈಡೇರಿಕೆಯಂತಹ ಕೆಲವು ದೊಡ್ಡ ಘೋಷಣೆ ಮಾಡುವ ಸಾಧ್ಯತೆಯಿದೆ.
ನಿತ್ಯ ಟ್ರಾಫಿಕ್ ಸಮಸ್ಯೆಗಳು ಮತ್ತು ಪ್ರವಾಹ ಸಮಸ್ಯೆಗಳಿರುವ ಬೆಂಗಳೂರಿಗೆ ಬಜೆಟ್‌ನಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡುವ ಸಾಧ್ಯತೆಯಿದೆ. ಈ ವಾರದ ಆರಂಭದಲ್ಲಿ, ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್(TomTom Traffic Index) ಪ್ರಕಾರ ಬೆಂಗಳೂರು ವಿಶ್ವದ ಅತ್ಯಂತ ಹೆಚ್ಚು ಟ್ರಾಫಿಕ್ ದಟ್ಟಣೆಯ ನಗರಗಳಲ್ಲಿ ಸ್ಥಾನ ಪಡೆದಿತ್ತು. ಭಾರತದ ಅತ್ಯಂತ ಹೆಚ್ಚು ಟ್ರಾಫಿಕ್-ದಟ್ಟಣೆಯ ನಗರಗಳ ಪಟ್ಟಿಯಲ್ಲಿ ಬೆಂಗಳುರು ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಪುಣೆ (6 ನೇ ಸ್ಥಾನ), ನವದೆಹಲಿ (34) ಮತ್ತು ಮುಂಬೈ (47) ಇವೆ. ಹೀಗಾಗಿ ಇಂದಿನ ಬಜೆಟ್ ಹಲವು ಕಾರಣಗಳಿಂದ ತೀವ್ರ ಕುತೂಹಲ ಸೃಷ್ಟಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.