. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ -ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್ ದೇಶದ ಪ್ರತಿಷ್ಠಿತ ឯក Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.
ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು 'Professor of Practice' ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್ ಮನನ ತರಬೇತಿ ನೀಡಲಾಗುವುದು.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.
KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಆರೋಗ್ಯವಂತ ಜನರಿಂದ ಮಾತ್ರ ಸಮತೋಲಿತ ಸಮಾಜ ನಿರ್ಮಾಣ ಸಾಧ್ಯ ಎಂದು ನಾವು ನಂಬಿದ್ದೇವೆ. ಜನನದಿಂದ ಎಲ್ಲಾ
ವಯೋಮಾನದವರಿಗೂ ವರ್ಗಬೇಧವಿಲ್ಲದೇ, ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸಲು ನಾವು ಬದ್ಧರಾಗಿದ್ದೇವೆ. ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ನಮ್ಮ ಸಂಕಲ್ಪವಾಗಿದೆ.
ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ. ಒದಗಿಸಲಾಗಿದೆ:
i) ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್ ತಂತ್ರಜ್ಞಾನದ ಮೂಲಕ ಬಲಪಡಿಸಲಾಗುವುದು. ಹೆರಿಗೆ ಸೇವೆಗಳನ್ನು
ii) ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್‌ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳನ್ನು ವಿತರಣೆ ಮಾಡಲಾಗುವುದು.
iii) ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು MCH ಆಸ್ಪತ್ರೆಯಲ್ಲಿ ನಿಯೋಜಿಸಲಾಗುವುದು. ತಜ್ಞರನ್ನು
iv) ರಾಜ್ಯದಲ್ಲಿ ಸಂಭವಿಸುವ ತಾಯಿ ಮರಣವನ್ನು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡಿಸಲಾಗುವುದು. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು.
ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಈ ಕೆಳಕಂಡ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ:
i) ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
ii) ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.
iii) ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ: 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ.
iv) ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಅನುಷ್ಠಾನಗೊಳಿಸಲಾಗುವುದು: ಕಾರ್ಯ ಯೋಜನೆಗಳನ್ನು
i) ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ii) ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ಳಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ದಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸ…
iv) 26 ರೂ. ಕೋಟಿ ನೆಫ್ರ-ಯುರಾಲಾಜಿ ಪೂರ್ಣಗೊಳಿಸಿ ಸಮರ್ಪಿಸಲಾಗುವುದು. ವೆಚ್ಚದ ಸಂಸ್ಥೆಯ ಸಾರ್ವಜನಿಕರ ಬೆಂಗಳೂರಿನ ಕಟ್ಟಡವನ್ನು ಸೇವೆಗೆ
ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ.
ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು.
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.
2025-26 ಸಾಲಿನಲ್ಲಿ ಸಾರ್ವಜನಿಕರಿಗೆ ಸುಧಾರಿತ ಆರೋಗ್ಯ ಸೇವೆಯನ್ನು ಒದಗಿಸಲು ಈ ಕೆಳಕಂಡಂತೆ ಹೊಸ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
i) ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು.
ii) ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
iii) ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳನ್ನು ಆರಂಭಿಸಲಾಗುವುದು.
iv) ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
v) ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.
vi) ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿ! ಆಸತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲಾಗುವುದು.
ಕಿ
vii) ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸಲಾಗುವುದು. KKRDB ಅನುದಾನದಲ್ಲಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ.
ಡಾ। ಬಿ. ಆರ್. ಅಂಬೇಡ್ಕರ್ 158. ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು.
ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.
ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.
ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.
ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.
ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ನಡೆಸಲಾಗುವುದು. ವಿಕಲಚೇತನರ ಸಮೀಕ್ಷೆ
ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ /ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.
Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ವಿಸ್ತರಿಸಲಾಗುವುದು. ಬಳಲುತ್ತಿರುವ ಆರೈಕೆದಾರರಿಗೂ *
ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಮೇಲ್ದರ್ಜೆಗೇರಿಸಲಾಗುವುದು. ಪ್ರೌಢಶಾಲಾ ಹಂತಕ್ಕೆ
ವಿಶೇಷ ಪಾಲನಾ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ
ಧನಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.
ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು.
ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ ಒದಗಿಸಲಾಗುವುದು. 94,084 ಕೋಟಿ ರೂ.
ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು.
ಸಮಾಜ ಕಲ್ಯಾಣ
ಸಮಾಜವು ತನ್ನ ಅಸಹಾಯಕ ಸದಸ್ಯರ ಕುರಿತು ತೋರುವ ಕಾಳಜಿಯು ಆ ನಾಗರಿಕತೆಯ ಪ್ರಬುದ್ಧತೆಯನ್ನು ತೋರಿಸುತ್ತದೆ.
ಡಾ| ರಾಮ ಮನೋಹರ ಲೋಹಿಯಾ
ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 29,992 ಕೋಟಿ ರೂ. ಹಾಗೂ ಬುಡಕಟ್ಟು
ಉಪಯೋಜನೆಗೆ 12.026 ಕೋಟಿ ರೂ.ಗಳೂ ಸೇರಿದಂತೆ ಒಟ್ಟಾರ 42,018 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ # ಅಧಿನಿಯಮದನ್ವಯ ಎರಡು ಕೋಟಿ ರೂ. ಮೊತ್ತದವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಗುತ್ತಿಗೆದಾರರಿಗೆ ಮೀಸಲಾತಿ ಒದಗಿಸಲಾಗುವುದು.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಸರ್ಕಾರದ ವಿವಿಧ ಇಲಾಖೆ, ನಿಗಮ ಹಾಗೂ ಸಂಸ್ಥೆಗಳಲ್ಲಿ ಖರೀದಿಸುವ ಸರಕು ಮತ್ತು ಸೇವೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಸರಬರಾಜುದಾರರಿಗೆ ಒಂದು ಕೋಟಿ ರೂ. ವರೆಗೆ ಮೀಸಲಾತಿಯನ್ನು ನೀಡಲಾಗುವುದು.
ರಾಜ್ಯದಲ್ಲಿನ ಪರಿಶಿಷ್ಟ 2503 ಕಾಲೋನಿಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಪ್ರಗತಿ ಕಾಲೋನಿ ಯೋಜನೆಯಡಿ 2024-25 ನೇ ಸಾಲಿನಲ್ಲಿ 559 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾತಿ ನೀಡಲಾಗಿರುತ್ತದೆ.
ಕ್ರೈಸ್ ವಸತಿ ಶಾಲೆಗಳಿಗೆ ಒಟ್ಟು 213 ಕೋಟಿ ರೂ. ವೆಚ್ಚದಲ್ಲಿ ಪ ಅಗತ್ಯವಿರುವ ಡೆಸ್ಕ್, ಬೆಂಚ್, ಪೀಠೋಪಕರಣಗಳು ಇತ್ಯಾದಿ ಶೈಕ್ಷಣಿಕ ಮೂಲಸೌಕರ್ಯಗಳನ್ನು ಒದಗಿಸಲಾಗುವುದು.
ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆಯ 34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
ಸಂವಿಧಾನ ಶಿಲ್ಪಿ ಡಾ॥ ಬಿ.ಆರ್.ಅಂಬೇಡ್ಕರ್ ರವರು ಅಧ್ಯಯನ ಮಾಡಿರುವ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳಿಗೆ ಡಾ॥ ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಯೋಜನೆಯಡಿ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು.
ಪರಿಶಿಷ್ಟ 2503 ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ನೀಡಲಾಗುವುದು.
ನಿರಾಶ್ರಿತರ ಮಾನಸಿಕ ಸ್ವಸ್ಥತೆಗಾಗಿ ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು.
ವಿದ್ಯಾರ್ಥಿನಿಲಯಗಳಲ್ಲಿ ನೀಡಲಾಗುತ್ತಿರುವ ಆಹಾರ ವ್ಯವಸ್ಥೆಯ ಬಗ್ಗೆ ಪಾರದರ್ಶಕತೆಯನ್ನು ತರಲು ಸಾಮಾಜಿಕ ಪರಿಶೋಧನೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆಯನ್ನು ಕ್ರೈಸ್ ವತಿಯಿಂದ ಪ್ರಾರಂಭಿಸಲಾಗುವುದು. ಸಂತ
ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಲಾಗುವುದು. ಬೆಂಬಲ ನೀಡಲು
ರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013 ರನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ ಹಂಚಿಕೆ 72ಮಾಡಿರುವ ಅನುದಾನದ ಸದ್ಬಳಕೆಯ ಬಗ್ಗೆ ಮೌಲ್ಯಮಾಪನವನ್ನು ಮಾಡಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಲಾಗುವುದು.
ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅದೇ ಕಾಲೇಜಿನ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ, ಅವರಿಗೆ ವಸತಿ ನಿಲಯದ ವೆಚ್ಚವಾಗಿ ಪ್ರತಿ ಮಾಹೆ 0.3,500/-ಪಾವತಿಸಲಾಗುವುದು. ಗಳನ್ನು
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಮುದಾಯದವರು ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂ. ಸಹಾಯಧನವನ್ನು ನಿಗಮದ ಮೂಲಕ ನೀಡಲಾಗುವುದು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ ಒಂದು ಲಕ್ಷ ರೂ. ಸಾಲ ಮತ್ತು 1.50
ಲಕ್ಷ ರೂ. ಸಹಾಯಧನವನ್ನು 2.50 ಲಕ್ಷ ರೂ. ಸಾಲ ಮತ್ತು 2.50 ಲಕ್ಷ ರೂ. ಸಹಾಯಧನ ಮೊತ್ತಕ್ಕೆ ಹೆಚ್ಚಿಸಲಾಗುವುದು.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ
192. 2024-25ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಒಟ್ಟಾರೆ 3,67,281 ವಿದ್ಯಾರ್ಥಿಗಳಿಗೆ ಒಟ್ಟು 120 ಕೋಟಿ ರೂ. ವಿದ್ಯಾರ್ಥಿವೇತನ ಮಂಜೂರು ಮಾಡಲಾಗಿದೆ. ಮುಂದುವರೆಸಲಾಗುವುದು. ಈ ಯೋಜನೆಯನ್ನು
ವರು ದನ್ನು
ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ 12 ಬುಡಕಟ್ಟು ಸಮುದಾಯಗಳ 47,859 ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯಡಿ 120 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕ ಆಹಾರ ಕಿಟ್‌ಗಳನ್ನು ನೀಡಲಾಗುತ್ತಿದೆ.