ಬೆಂಗಳೂರು : ಮುಜರಾಯಿ ಇಲಾಖೆ ಮತ್ತು ಮಹಿಳಾ ಕಲ್ಯಾಣಕ್ಕೆ ದಾಖಲೆಯ ಅನುದಾನ ನೀಡುವ ಮೂಲಕ ಹಣಕಾಸು ಇಲಾಖೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬಣ್ಣಿಸಿದ್ದಾರೆ.


COMMERCIAL BREAK
SCROLL TO CONTINUE READING

ಮುಜರಾಯಿ ಇಲಾಖೆಗೆ ಈ ಬಾರಿಯ ಬಜೆಟ್ ನಲ್ಲಿ 1,000 ಕೋಟಿ ರೂಪಾಯಿ ಮೀಸಲಿಟ್ಟಿರುವುದರಿಂದ ರಾಜ್ಯದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕ್ರಾಂತಿಗೆ ಸಹಕಾರಿಯಾಗಲಿದೆ. ಈ ದೊಡ್ಡ ಪ್ರಮಾಣದ ಅನುದಾನದಿಂದಾಗಿ ದೇವಸ್ಥಾನಗಳು ಮತ್ತು ಮಠಗಳ ಕಾಯಕಲ್ಪಕ್ಕೆ ವೇಗ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವದ ಮೊದಲ ಸಂಸತ್ತೆನಿಸಿದ ಅನುಭವ ಮಂಟಪದ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದರ ಕಾಮಗಾರಿ ಭರದಿಂದ ಸಾಗಿದ್ದು, ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ಹಿಂದು ಧಾರ್ಮಿಕ ಭೂಮಿಗಳ ವರ್ಷಾಸನವನ್ನು 48,000 ರೂಪಾಯಿಯಿಂದ 60,000 ರೂಪಾಯಿವರೆಗೆ ಹೆಚ್ಚಳ ಮಾಡಿರುವುದರಿಂದ ರಾಜ್ಯದ 3721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್: ಸಿದ್ದರಾಮಯ್ಯ


ಮಹಿಳೆಯರ ಸಬಲೀಕರಣಕ್ಕೆ ಗೃಹಿಣಿ ಶಕ್ತಿ ಯೋಜನೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ, ಮಹಿಳಾ ಕಾರ್ಮಿಕರಿಗೆ 500 ರೂ. ಮಾಸಾಶನ, ರೈತರಿಗೆ ʼಭೂ ಸಿರಿ’ ಯೋಜನೆ ಸೇರಿದಂತೆ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಪ್ರಕಟಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಸ್ನೇಹಿ ಬಜೆಟ್ ಅನ್ನು ನೀಡಿದ್ದಾರೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.