ಬೆಂಗಳೂರು, ಫೆಬ್ರವರಿ 17- ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ  7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜಧಾನಿಯಲ್ಲಿ10 ಲಕ್ಷಕ್ಕೂ ಅಧಿಕ ಡಿಜಿಟಲ್‌ ಮೀಟರ್‌ ಅಳವಡಿಕೆ : ಗ್ರಾಹಕರಿಗೆ ತಪ್ಪದ ಹೆಚ್ವಿನ ಹೊರೆ


ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಇದನ್ನೂ ಓದಿ:ಪರಿಸರ ಸ್ನೇಹಿ ವೇದಿಕೆ ಪರಿಕಲ್ಪನೆ; ವಿಲೇವಾರಿ ಮಾಡಬಹುದಾದ ರೂ.14 ಲಕ್ಷ ಮೊತ್ತದ ಪ್ಲಾಸ್ಟಿಕ್ ವಸ್ತುಗಳ ಬಳಕೆ


ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು.ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.