ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವೈಫಲ್ಯವನ್ನು ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಇಲ್ಲದಿದ್ದರೆ, ಕೋವಿಡ್ ಸಂಕಷ್ಟದಿಂದ ಇಷ್ಟು ಬೇಗ ಹೊರಗೆ ಬರಲು ಸಾಧ್ಯವಾಗುತ್ತಿರಲಿಲ್ಲ. 2023 ರ ಮಾರ್ಚ್‌ವರೆಗೆ, 9.88 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳನ್ನು ಕರ್ನಾಟಕಕ್ಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 2,141 ಕೋಟಿ ರೂ. ಖರ್ಚು ಮಾಡಿದೆ. 


ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಸತತ ಎರಡು ವರ್ಷಗಳ ಕಾಲ ತಿಂಗಳಿಗೆ 10ಕೆಜಿ ಆಹಾರ ಧಾನ್ಯ ನೀಡಲಾಗಿತ್ತು. ಆಯುಷ್ಮಾನ್ ಭಾರತ್ ಯೋಜನೆಯಡಿ ಕೋಟ್ಯಂತರ ಜನರಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ. ಇವೆಲ್ಲ ಇಲ್ಲದಿದ್ದರೆ ನಮ್ಮ ದೇಶ ಕೊವಿಡ್ ಪ್ರಮಾಡದಿಂದ ಇಷ್ಟು ಬೇಗ ಹೊರಬಂದು ಸಹಜ ಸ್ಥಿತಿಗೆ ಮರಳಲು ಸಾಧ್ಯವಾಗುತ್ತಿತ್ತೆ? ಮುಖ್ಯಮಂತ್ರಿ ಸಿದ್ದಮಯ್ಯನವರು ಇವನ್ನೆಲ್ಲ ಪ್ರಶಂಸೆ ಮಾಡುವ ಮುತ್ಸದ್ದಿತನ ಪ್ರದರ್ಶನ ಮಾಡಬೇಕಿತ್ತು. ಅದು ಬಿಟ್ಟು ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.


ಇದನ್ನೂ ಓದಿ- 14ನೇ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ: ಯಾರಿಗೆ ಬೀಳುತ್ತೆ ಬರೆ, ಯಾರಿಗೆ ಸಿದ್ದು ಭಾಗ್ಯವಿಧಾತ..?


ಈ ಎಲ್ಲಾ ವಿಚಾರಗಳ ಬಗ್ಗೆ ಜಾಣ ಕುರುಡುತನ ಪ್ರದರ್ಶಿಸಿರುವ ಸಿಎಂ ಸಿದ್ದರಾಮಯ್ಯನವರ, ಬಿಜೆಪಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಹಿಂದಿನ ಸರ್ಕಾರದ ಮೇಲೆ, ಕೇಂದ್ರ ಸರ್ಕಾರದ ಮೇಲೆ ಗೂಬೇ ಕೂರಿಸುವ ವ್ಯರ್ಥ ಪ್ರಯತ್ನ ಮಾಡಿದ್ದಾರೆ. ಸಿದ್ದರಾಮಯ್ಯನವರು ವಿನಾ ಕಾರಣ ಪದೇ ಪದೆ ಮೋದಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದನ್ನು ಮೊದಲು ನಿಲ್ಲಿಸಬೇಕು.


ಸಾವಿರ ಸುಳ್ಳು ಹೇಳಿ ಮದುವೆ ಮಾಡು ಎಂಬಂತೆ, ಸಾವಿರ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರ ಹಿಡಿ ಎನ್ನುವ ರೀತಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. 10 ವರ್ಷ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಶಿಕ್ಷಣ ನೀತಿ ತರಲಿಲ್ಲ. ಆದರೆ ಪ್ರಧಾನಿ ಮೋದಿಯವರು ತಂದ ಶಿಕ್ಷಣ ನೀತಿಯನ್ನು ರದ್ದು ಮಾಡಲಾಗುತ್ತಿದೆ. ಇದು ಕಾಂಗ್ರೆಸ್‌ನ ಕೀಳು ರಾಜಕೀಯ. ಈ ನೀತಿಯ ಬಗ್ಗೆ ಅನೇಕ ಶಿಕ್ಷಣ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದು ರಿವರ್ಸ್‌ ಮಾಡುವ ಸರ್ಕಾರವಾಗಿದ್ದು, ಅಭಿವೃದ್ಧಿಯೂ ರಿವರ್ಸ್‌ ಗೇರ್‌ನಲ್ಲಿ ಹಿಂದಕ್ಕೆ ಚಲಿಸಿ ಪ್ರಗತಿ ಕುಂಠಿತವಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.