“ಜಾತ್ರೆ ಮುಗಿದ ಮೇಲೆ ಸ್ಟಾಕ್ ಕ್ಲಿಯರೆನ್ಸ್ ಘೋಷಣೆ ಮಾಡುವ ರೀತಿಯಲ್ಲಿದೆ ಈ ಬಜೆಟ್”

ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

Written by - Prashobh Devanahalli | Edited by - Manjunath N | Last Updated : Feb 17, 2023, 07:24 PM IST
  • ಬಜೆಟ್ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆ
  • ಜಾತ್ರೆ ಮುಗಿದ ಮೇಲೆ ಅಂಗಡಿಗಳು ರಿಯಾಯಿತಿ ದರದಲ್ಲಿ ಸ್ಟಾಕ್ ಕ್ಲಿಯರೆನ್ಸ್ ಘೋಷಣೆ ಮಾಡುವ ರೀತಿಯಲ್ಲಿದೆ ಈ ಬಜೆಟ್
  • ರಾಮನಗರದಲ್ಲಿ ರಾಮಮಂದಿರದ ಭರವಸೆ ಬಜೆಟ್ ಪುಸ್ತಕದಲ್ಲಿಯೇ ಉಳಿಯಲಿದೆ ಎಂದ ಹೆಚ್ಡಿಕೆ
 “ಜಾತ್ರೆ ಮುಗಿದ ಮೇಲೆ ಸ್ಟಾಕ್ ಕ್ಲಿಯರೆನ್ಸ್ ಘೋಷಣೆ ಮಾಡುವ ರೀತಿಯಲ್ಲಿದೆ ಈ ಬಜೆಟ್” title=
file photo

ಬೆಂಗಳೂರು: ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇನ್ನೂ ಸರಳವಾಗಿ ಹೇಳುವುದಾದರೆ, ವರ್ಷಕ್ಕೊಮ್ಮೆ ಜಾತ್ರೆ ಮುಗಿದ ಮೇಲೆ ಅಲ್ಲಿನ ಅಂಗಡಿಗಳು ಸ್ಟಾಕ್ ಕ್ಲಿಯರೆನ್ಸ್ ಸೇಲ್ ಬೋರ್ಡ್ ಹಾಕಿ ರಿಯಾಯಿತಿ ದರದ ಘೋಷಣೆ ಮಾಡುತ್ತವೆ, ಹಾಗಿದೆ ಈ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ನೀಡಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮೂರು ವರ್ಷಗಳಲ್ಲಿ ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದೆ. ಕೈಗಾರಿಕೆ, ಮೂಲಸೌಕರ್ಯ, ಸಾರಿಗೆ, ಶಿಕ್ಷಣ, ಕೃಷಿ ಸೇರಿ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಬಸವಳಿದಿದೆ. ಕೇಂದ್ರದ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವ ದುಸ್ಥಿತಿ ಬಂದಿದೆ. ಕೇಂದ್ರ ಸರಕಾರವು ರಾಜ್ಯಕ್ಕೆ ಅನುದಾನವನ್ನು ಭಿಕ್ಷೆಯಂತೆ ಹಾಕುತ್ತಿದೆ. ಇನ್ನು ಈ ಬಜೆಟ್ಟಿನ ಹಣೆಬರಹಕ್ಕೆ ದಿಕ್ಕೆಲ್ಲಿ ಎಂದು ಮಾಜಿ ಮುಖ್ಯಮಂತ್ರಿ ಅವರು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ರಾಜಧಾನಿಯಲ್ಲಿ10 ಲಕ್ಷಕ್ಕೂ ಅಧಿಕ ಡಿಜಿಟಲ್‌ ಮೀಟರ್‌ ಅಳವಡಿಕೆ : ಗ್ರಾಹಕರಿಗೆ ತಪ್ಪದ ಹೆಚ್ವಿನ ಹೊರೆ

ಬೊಮ್ಮಾಯಿ ಬಜೆಟ್​ಗೆ ಯಾವುದೇ ಮಹತ್ವ ಇಲ್ಲ. ಇದು ಅತ್ಯಂತ ನೀರಸ, ಮಾತ್ರವಲ್ಲ ನಿರುಪಯುಕ್ತ ಕೂಡ. ಚುನಾವಣೆ ನಂತರ ಬರುವ ಸರಕಾರ ಮಂಡಿಸುವ ಬಜೆಟ್ ಜಾರಿಗೆ ಬರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎನ್ನುವುದು ಎಲ್ಲ ಕನ್ನಡಿಗರಿಗೂ ಗೊತ್ತಿರುವ ಸಂಗತಿ ಎಂದು ಅವರು ತಿಳಿಸಿದ್ದಾರೆ.

ನಾನು ಪಂಚರತ್ನ ರಥಯಾತ್ರೆ ನಡೆಸುವಾಗ ರಾಜ್ಯದ ಉದ್ದಗಲಕ್ಕೂ ಶಾಲೆ ಮಕ್ಕಳ ಕಷ್ಟವನ್ನು ಕಂಡೆ. ಶಾಲೆಗೆ ಹೋಗಲು ಬಸ್ ಇಲ್ಲದೆ ಕಾಡುಮೇಡುಗಳಲ್ಲಿ, ಕ್ರೂರ ಮೃಗಗಳ ಭೀತಿಯ ನಡುವೆ ನಡೆದು ಹೋಗುತಿದ್ದರು. ಅನೇಕ ಕಡೆ ಶಾಲೆ ಕಾಲೇಜುಗಳು ಕುಸಿದು ಬೀಳುವ ಸ್ಥಿತಿಯಲ್ಲಿದ್ದವು. ಈ ಬಗ್ಗೆ ನಾನು ದನಿಯತ್ತಿ ಸರಕಾರವನ್ನು ಒತ್ತಾಯ ಮಾಡಿದ್ದೆ. ಈಗ ಮಕ್ಕಳ ಬಸ್ಸು ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಆದರೆ, ಈ ಯೋಜನೆಯನ್ನು ಚುನಾವಣೆಗೆ ಮೊದಲೇ ಜಾರಿ ಮಾಡುತ್ತಾರಾ? ಅಥವಾ ಚುನಾವಣೆ ನಂತರ ಜಾರಿ ಮಾಡುತ್ತಾರಾ? ಎನ್ನುವುದಕ್ಕೆ ಮುಖ್ಯಮಂತ್ರಿಗಳು ಏನೂ ಹೇಳಿಲ್ಲ, ಬುದ್ದಿವಂತಿಕೆಯಿಂದ ಜಾರಿಕೊಂಡಿದ್ದಾರೆ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿಗಳು.

ಇನ್ನು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುತ್ತಿರುವ ಬೆಂಗಳೂರು ಕೊಳಚೆ ನೀರಿನ ಮೂರನೇ ಹಂತದ ಸಂಸ್ಕರಣೆ ಬಗ್ಗೆ, ಟರ್ಸರಿ ಘಟಕ ಹಾಕುವ ಬಗ್ಗೆ ನೂರಾರು ಸಲ ನಾನು ಒತ್ತಾಯ ಮಾಡಿದ್ದೆ. ಆದರೆ, ಆ ನೀರು ಶುದ್ಧವಾಗಿದೆ, ಕುಡಿಯಲು ಯೋಗ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅವರೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೇಳಿಕೆ ನೀಡಿದ್ದರು. ಈಗ ಟರ್ಸರಿ ಘಟಕ ಹಾಕುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಅಂದರೆ, ಈ ಸರಕಾರಕ್ಕೆ ತಾನು ಮಾಡಿದ ಪಾಪದ ಅರಿವಾಗಿದೆ ಸರಿ, ಆದರೆ; ಟರ್ಸರಿ ಘಟಕ ಸ್ಥಾಪನೆ ಮಾಡುವುದು ಯಾವಾಗ? ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಖುದ್ದು ಪರಿಶೀಲನೆ ನಡೆಸಿದ ನ್ಯಾ‌.ಬಿ.ಎಸ್.ಪಾಟೀಲ್

ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ವಿಚಾರದ ಬಗ್ಗೆ ಹೇಳುವುದಾದರೆ, ರೈತರು ಸಾಲಗಾರನಾಗದಂತೆ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಬೇಕು. ಈ ಕುಮಾರಸ್ವಾಮಿ‌ ಇಲ್ಲದಿದ್ದರೆ ಈ ವೇಳೆಗೆ ಎಲ್ಲಾ ಡಿಸಿಸಿ ಬ್ಯಾಂಕ್ ಗಳು ದಿವಾಳಿಯೆದ್ದು ಹೋಗುತ್ತಿದ್ದವು. ಆ ಬ್ಯಾಂಕ್​​ಗಳಿಗೆ ಶಕ್ತಿ‌ ತುಂಬಿರೋದು ನಾನು. ಅದರಿಂದಲೇ ಈಗ ಬಿಜೆಪಿ ಸರಕಾರ ಸಾಲ ಕೊಡುತ್ತೇವೆ ಎಂದು ಹೇಳುತ್ತಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯಿಂದ ರಾಮನಗರದಲ್ಲಿ ರಾಮಮಂದಿರ ಕಟ್ಟಲು  ಸಾಧ್ಯವಿಲ್ಲ. ರಾಮಮಂದಿರ ಘೋಷಣೆ ಬಜೆಟ್ ಬುಕ್‌ನಲ್ಲೇ ಉಳಿಯುತ್ತದೆ. ರಾಮಮಂದಿರ ನಿರ್ಮಾಣ ನನ್ನಿಂದ ಸಾಧ್ಯ. ರಾಮನಗರದಲ್ಲಿ ಯಾವುದೇ ಜಪ ಮಾಡಿದರು ಏನೂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News