ಕೇಂದ್ರದಿಂದ ರಾಜ್ಯದವರೆಗೂ ಬಿಜೆಪಿ ಮೊದಲಿಂದಲೂ ಜನರ ಕಿವಿ ಮೇಲೆ ಹೂವಿಡುತ್ತಲೇ ಬಂದಿದೆ.
ಲ್ಯಾಪ್ಟಾಪ್ ಹಂಚಿಕೆಯಿಂದ ಹಿಡಿದು ವಿದ್ಯಾರ್ಥಿವೇತನದವರೆಗೂ ವಿದ್ಯಾರ್ಥಿಗಳಿಗೆ ಬಿಜೆಪಿ ಸರ್ಕಾರ ಎಲ್ಲಾ ತರದಲ್ಲೂ ದ್ರೋಹವೆಸಗಿದೆ.
ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ರೈತರ ಕಿವಿ ಮೇಲೆ ಹೂವಿಟ್ಟ ಸರ್ಕಾರ ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸಲಿಲ್ಲ.
ಮಹಿಳೆಯರಿಗೆ ಸ್ತ್ರೀ ಉನ್ನತಿ ನಿಧಿ ಸ್ಥಾಪಿಸುತ್ತೇವೆ, ಸ್ಮಾರ್ಟ್ ಫೋನ್ ನೀಡುತ್ತೇವೆ ಎಂದಿತ್ತು ಬಿಜೆಪಿ. ಅದ್ಯಾವ ಭರವಸೆಗಳೂ ಈಡೇರಿಲ್ಲ.
ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳದ ಭರವಸೆ ನೀಡಿತ್ತು ಬಿಜೆಪಿ. ಆದರೆ ಆ ನಿಟ್ಟಿನಲ್ಲಿ ಸಣ್ಣ ಪ್ರಯತ್ನವನ್ನೂ ಮಾಡದೆ ಜನರ ಕಿವಿ ಮೇಲೆ ಹೂವಿಟ್ಟಿದೆ.
ಕಿವಿ ಮೇಲೆ ಹೂವಿಡುವುದು ಬಿಜೆಪಿಯ ಇತಿಹಾಸದಲ್ಲಿಯೇ ಇದೆ, ಈಗಲೂ ಅದನ್ನೇ ಮಾಡ್ತಿದಾರೆ.