ಚಿಕ್ಕೋಡಿ: ಸುಮಾರು 2000ಕ್ಕೂ ಅಧಿಕ ಹೆಚ್ಚು ಹಳೆ ಬಸುಗಳಿವೆ. ಇವುಗಳ ಉಪಯೋಗ ಮಹಿಳೆಯರಿಗಾಗಿ ವಿಶೇಷ ಮೊಬೈಲ್ ಬಸ್ ನಿರ್ಮಿಸಲು ಮಾಡಲಾಗುತ್ತಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಿಪ್ಪಾಣಿ ತಾಲೂಕಿನ ಗಡಿಯಂಚಿನಲ್ಲಿರುವ ಬೋರಗಾಂವ ಪಟ್ಟಣದಲ್ಲಿ ನಿರ್ಮಾಣವಾದ ಹೈಟಿಕ್ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಲಕ್ಷ್ಮಣ ಸವದಿ(Laxman savadi), ಈ ಮೊಬೈಲ್ ಬಸ್‌ಗಳಲ್ಲಿ ಮಹಿಳೆಯರಿಗಾಗಿ ಶೌಚಾಲಯ, ಸ್ನಾನಗೃಹ, ಶಿಶು ಆರೈಕೆ ಕೊಠಡಿ, ಡ್ರೆಸ್ಸಿಂಗ್ ರೂಮ್, ವಾಶ್‌ರೂಮ್ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಾಗಿ ಸಾರಿಗೆ ಬಸ್‌ಗಳಲ್ಲಿ ಸಂಚರಿಸಿ, ಇಲಾಖೆಗೆ ಸಹಕರಿಸಬೆಕೆಂದು ಮನವಿ ಮಾಡಿದರು.
ST Somashekar: ಅರ್ಹ ಎಲ್ಲ ರೈತರಿಗೂ ಸಾಲಮನ್ನಾ ಸವಲತ್ತು..!?
ಕೊರೋನಾ ಸಮಯದಲ್ಲಿ ಸಾರಿಗೆ ಇಲಾಖೆ ನಷ್ಟದಲ್ಲಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜೊತೆಗೆ ಚರ್ಚಿಸಿ 650 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿ ಸಿಬ್ಬಂದಿ ವೇತನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
S.Suresh Kumar: ಶಿಕ್ಷಕರ ಪರವಾಗಿ ಮೋದಿ ಮುಂದೆ ಮಹತ್ವದ ಬೇಡಿಕೆ ಇಟ್ಟ ಸಚಿವ ಸುರೇಶ್ ಕುಮಾರ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ..
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.