ಅರಮನೆ ಮೈದಾನದಲ್ಲಿ ಫೆಬ್ರುವರಿ 26, 27ರಂದು 'ಯುವ ಸಮೃದ್ಧಿ ಮೇಳ"

Yuva Samriddhi Mela : ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರುವರಿ 26,27ರಂದು ಒಂದು ಲಕ್ಷ ಉದ್ಯೋಗ ಅವಕಾಶ ದೊರಕಿಸಿ ಕೊಡುವ ಉದ್ದೇಶದಿಂದ ಯುವ ಸಮೃದ್ಧಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

Written by - Zee Kannada News Desk | Last Updated : Feb 21, 2024, 11:16 PM IST
  • ಈಗಾಗಲೇ ಆನ್ಲೈನ್ ನೋಂದಣಿ ಆರಂಭವಾಗಿದ್ದು, 31 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
  • ಯುವ ಸಮೃದ್ಧಿ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪನಿಗಳಲ್ಲಿ ಒಂದು ಲಕ್ಷ ಹುದ್ದೆಗಳು ಲಭ್ಯವಿದೆ
  • ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ಪಡೆಯಲು ಈ ಮೇಳ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಅರಮನೆ ಮೈದಾನದಲ್ಲಿ ಫೆಬ್ರುವರಿ 26, 27ರಂದು 'ಯುವ ಸಮೃದ್ಧಿ ಮೇಳ" title=

Yuva Samriddhi Mela on 26th and 27th February  :  ಯುವ ಸಮೃದ್ಧಿ ಮೇಳ ಇದೇ  26, 27ರಂದು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಇಂಜಿನಿಯರಿಂಗ್ ಡಿಪ್ಲೋಮಾ ಮತ್ತಿತರ ವೃತ್ತಿಪರ ಕೋರ್ಸ್ ಸೇರಿದಂತೆ ನಿರುದ್ಯೋಗಿ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶವನ್ನು ಹೊಂದಿದೆ.

ಇದಕ್ಕೂ ಮೊದಲು ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳವು ನಡೆದಿತ್ತು . ಬುಧವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಮತ್ತು ಕೌಶಲಾಭಿವೃದ್ದಿ ಮತ್ತು
ಜೀವನೋಪಾಯ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು " ಸಿದ್ದರಾಮಯ್ಯ ಅವರ ಸೂಚನೆಯಂತೆ ಈ ಬಾರಿ ಬೃಹತ್ ಮೇಳ ಆಯೋಜಿಸಲಾಗಿದೆ " ಎಂದು ಮಾಹಿತಿ ನೀಡಿದರು. 

ಇದನ್ನು ಓದಿ  

ಮೇಳ ಆರಂಭದ ದಿನದವರೆಗೂ ನೋಂದಣಿಗೆ ಅವಕಾಶವಿದೆ.  ಈಗಾಗಲೇ ಆನ್ಲೈನ್ ನೋಂದಣಿ ಆರಂಭವಾಗಿದ್ದು, 31 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 

ಯುವ ಸಮೃದ್ಧಿ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪನಿಗಳಲ್ಲಿ ಒಂದು ಲಕ್ಷ ಹುದ್ದೆಗಳು ಲಭ್ಯವಿದೆ ಮತ್ತು ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ಪಡೆಯಲು ಈ ಮೇಳ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ. 

ಇದನ್ನು ಓದಿ  

ನೊಂದಣಿ ವೇಳೆ ನೀಡಿದ ಮಾಹಿತಿ ಆಧಾರದ ಮೇಲೆ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಗೆ ಪ್ರತಿ ಅಭ್ಯರ್ಥಿಯು ಭೇಟಿ ನೀಡಬಹುದಾದ ಮಳಿಗೆಗಳ ಕುರಿತು ಮಾಹಿತಿ ಸಂದೇಶ ರವಾನೆ ಆಗಲಿದೆ ಮತ್ತು ಮೇಳದಲ್ಲಿನ ಪ್ರತಿ ಮಳಿಗೆಗೂ ಅಭ್ಯರ್ಥಿಗಳು ಭೇಟಿ ನೀಡಬಹುದು ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಲಭ್ಯವಿರುವ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ  ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News