ಬೆಂಗಳೂರು: ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ದಷ್ಟು ಕಡಿತ ಮಾಡಲು ಈಗ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.ಈ ಪರಿಷ್ಕೃತ  ಆದೇಶ ಜೂನ್ 1 ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೀರಿಗೆ ಬರ, ಟ್ಯಾಂಕರ್ ಗೆ ಮೊರೆ!


ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ಬೇಸಿಗೆಯ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂಪಾಯಿ ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು.ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.


ಇದನ್ನೂ ಓದಿ: NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ


ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು, ಈಗ ಅದು 16 ಲಕ್ಷ ಲೀಟರ್ ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ.ಇದರಿಂದಾಗಿ ಈಗ ಲೀಟರ್ ಗೆ 1.50 ರೂಪಾಯಿ ಕಡಿತಗೊಳಿಸಲು ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆಡಳಿತ ಮಂಡಳಿ ತಿರ್ಮಾನಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ