ಬೆಂಗಳೂರು : ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ವಸತಿ ರಹಿತ ಕುಟುಂಬಗಳಿಗೆ ಬೆಂಗಳೂರು ಮಹಾನಗರದಲ್ಲಿ ಸ್ವಂತ ಸೂರು ಒದಗಿಸುವ ಮುಖ್ಯಮಂತ್ರಿಯವರ ಒಂದು ಲಕ್ಷ ವಸತಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. 


COMMERCIAL BREAK
SCROLL TO CONTINUE READING

ವಸತಿ ಸಚಿವ ಕೃಷ್ಣಪ್ಪ, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಯೋಜನೆಗೆ ಆನ್ ಲೈನ್ ಅರ್ಜಿ ವೆಬ್ ಸೈಟ್ ಚಾಲನೆ ನೀಡಿದರು.


ಆಸಕ್ತರು ಕರ್ನಾಟಕ ಗೃಹಮಂಡಳಿ ಇಲಾಖೆ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಹೆಸರು ನೊಂದಾಯಿಸಿಕೊಳ್ಳಬಹುದು. ಲಾಟರಿ ಮೂಲಕ 75 ಸಾವಿರ ಫಲಾನುಭವಿಗಳ ಆಯ್ಕೆ, 25 ಸಾವಿರ ಬಿಟ್ಟು ಹೋದ ಅರ್ಹ ಫಲಾನುಭವಿಗಳಿಗೆ ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.