ಏಳು ಖಾಲಿ ಸಚಿವ ಸ್ಥಾನಕ್ಕೆ 10 ಶಾಸಕರ ಲಾಬಿ: ಇಲ್ಲಿದೆ ಸಚಿವಾಕಾಂಕ್ಷಿಗಳ ಪಟ್ಟಿ..!

ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಾಯಂಕಾಲದ ವೇಳೆ ನಿರ್ಧಾರ

Last Updated : Nov 18, 2020, 02:54 PM IST
  • ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಾಯಂಕಾಲದ ವೇಳೆ ನಿರ್ಧಾರ
  • ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರು ಲಾಬಿ
  • ನೂರಕ್ಕೆ ನೂರರಷ್ಟು ತಮಗೆ ಸಚಿವ ಸ್ಥಾನ ಸಿಗುವುದು ಖಚಿತ- ಮುರುಗೇಶ್ ನಿರಾಣಿ
ಏಳು ಖಾಲಿ ಸಚಿವ ಸ್ಥಾನಕ್ಕೆ 10 ಶಾಸಕರ ಲಾಬಿ: ಇಲ್ಲಿದೆ ಸಚಿವಾಕಾಂಕ್ಷಿಗಳ ಪಟ್ಟಿ..! title=

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಾಯಂಕಾಲದ ವೇಳೆ ನಿರ್ಧಾರವಾಗಲಿದೆ. ಈಗಾಗಲೇ ಸಿಎಂ ಯಡಿಯೂರಪ್ಪ(B.S.Yediyurappa) ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ. ಈ ನಡುವೆ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಬೀಳಗಿ ಶಾಸಕ ಮುರುಗೇಶ್ ನಿರಾಣಿ, ಹಿರಿಯೂರು ಶಾಸಕಿ ಪೂರ್ಣಿಮಾ, ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ, ದಾವಣಗೆರೆಯ ಎಸ್.ಎ. ರವೀಂದ್ರನಾಥ್, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.

ಡಿಕೆಶಿ ಪುತ್ರಿ ಐಶ್ವರ್ಯ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್..!

ಈ ಕುರಿತು ಮಾತನಾಡಿರುವ ಶಾಸಕ ಮುರುಗೇಶ್ ನಿರಾಣಿ, ನೂರಕ್ಕೆ ನೂರರಷ್ಟು ತಮಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ, ನಿಮಗೆ ಈ ಮೊದಲೇ ಸಚಿವ ಸ್ಥಾನ ಸಿಗಬೇಕಿತ್ತು. ಸ್ವಲ್ಪ ವಿಳಂಬವಾಗಿದೆ ಎಂದಿದ್ದರು. ಹಾಗಾಗಿ ಈ ಬಾರಿ ನನಗೆ ಸಚಿವ ಸ್ಥಾನ ನೀಡುವ ಭರವಸೆಯಿದೆ ಎಂದಿದ್ದಾರೆ.

ಮಹಾರಾಷ್ಟ್ರ ಡಿಸಿಎಂಗೆ 'ಖಡಕ್ ಎಚ್ಚರಿಕೆ' ನೀಡಿದ ಸಿಎಂ ಬಿಎಸ್‍ವೈ!

ಇನ್ನು ಶಾಸಕ ರೇಣುಕಾಚಾರ್ಯ, ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಬೇಡಿಕೆ ಇಟ್ಟಿಲ್ಲ. ಆದರೆ ದಾವಣಗೆರೆಗೆ ಸಚಿವ ಸ್ಥಾನ ನೀಡಬೇಕು. ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಹೇಳಿದ್ದಾರೆ.

BREAKING NEWS: ರಾಜ್ಯದಲ್ಲಿ 'ಹೊಸ ಜಿಲ್ಲೆ' ರಚನೆಗೆ ಸಚಿವ ಸಂಪುಟ ಒಪ್ಪಿಗೆ..!

ಒಟ್ಟಾರೆ ದಿನದಿಂದ ದಿನಕ್ಕೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಸಿಎಂ ಯಡಿಯೂರಪ್ಪ ಯಾವೆಲ್ಲ ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Trending News