ಬೆಂಗಳೂರು: ಇಲ್ಲಿನ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಊಟ ಸೇವಿಸಿದ ಬಳಿಕ 103ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಭಾನುವಾರ ರಾತ್ರಿ ನಡೆದಿದೆ. 


COMMERCIAL BREAK
SCROLL TO CONTINUE READING

ನಗರದ ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರಾದ ಮಕ್ಕಳನ್ನು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಜಿಲ್ಲಾಧಿಕಾರಿ ವಿಜಯಶಂಕರ್ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಬಾಲಮಂದಿರದಲ್ಲಿ ಈ ಘಟನೆ ನಡೆದಿದೆ. 103 ಮಕ್ಕಳಲ್ಲಿ, ಮೂರು ಮಕ್ಕಳು ತೀವ್ರವಾಗಿ ಅಸ್ವಸ್ಥತರಾಗಿದ್ದಾರೆ. ಇನ್ನೂ 40 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚೇತರಿಸಿಕೊಂಡಿರುವ ಮಕ್ಕಳನ್ನು ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಈಗಾಗಲೇ ಫುಡ್ ಸ್ಯಾಂಪಲ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರಿಗೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.