108 ಸಿಬ್ಬಂದಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ, ಸರ್ಕಾರದಿಂದ ವೇತನ ಪಾವತಿ ಬಾಕಿ ಇಲ್ಲ: ಸಚಿವ ಗುಂಡೂರಾವ್

ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು.

Written by - Prashobh Devanahalli | Last Updated : May 7, 2024, 08:37 PM IST
    • 108 ಆಂಬ್ಯುಲೆನ್ಸ್ ಸಿಬ್ಬಂದಿ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ
    • ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು
    • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
108 ಸಿಬ್ಬಂದಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ, ಸರ್ಕಾರದಿಂದ ವೇತನ ಪಾವತಿ ಬಾಕಿ ಇಲ್ಲ: ಸಚಿವ ಗುಂಡೂರಾವ್  title=
File Photo

ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂದಿ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು.

ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ವಿರುದ್ಧ ನೆರೆಮನೆಯವರ ದೂರು… ತಕ್ಷಣವೇ ಕ್ರಮ ಕೈಗೊಂಡ ಕ್ರಿಕೆಟ್ ಗಾಡ್!

ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು. ಸಂಸ್ಥೆಯವರೊಂದಿಗೆ ಒಡಂಬಡಿಕೆಯ ಪ್ರಕಾರ ಸರ್ಕಾರದಿಂದ ಕೊಡಬೇಕಾದ ಅನುದಾನವನ್ನ ಪಾವತಿಸಲಾಗಿದೆ. ಅನಗತ್ಯವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ.  ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ವೇತನ ಪಾವತಿಯಲ್ಲಿ ವ್ಯತ್ಯಾಸಗಳಾಗಿದ್ದರೆ ಅದನ್ನು ಸರಿಪಡಿಸುವಂತೆ ಸಂಸ್ಥೆಯವರಿಗೆ ತಿಳಿಸಲಾಗಿದೆ. 108 ಸಿಬ್ಬಂದಿಗಳ ಇನ್ನತರ ಕೆಲವು ಬೇಡಿಕೆಗಳಿವೆ. ಅದನ್ನು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಚರ್ಚಿಸೋಣ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದರು.‌

ಇದನ್ನೂ ಓದಿ: ಟಿ20 ವಿಶ್ವಕಪ್’ನಲ್ಲಿ ಭಾರತೀಯರದ್ದೇ ಪ್ರಾಬಲ್ಯ: ಕೊಹ್ಲಿ, ಧೋನಿ, ಯುವಿ ಹೆಸರಲ್ಲಿವೆ ಈ ದಾಖಲೆಗಳು!

ಅಂಬ್ಯುಲೆನ್ಸ್ ಸಿಬ್ಬಂದಿಗಳ ಮುಷ್ಕರ ನಡೆಸುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಕೇಳಿಬಂದ ಹಿನ್ನೆಲೆಯಲ್ಲಿ ಸಮಸ್ಯೆ ಬಗ್ಗೆ ಪರಿಶೀಲಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದರು. ಸಚಿವರ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತರಾದ ರಂದೀಪ್ 108 ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದ್ದು, ಆರೋಗ್ಯ ಇಲಾಖೆಯಿಂದ ಕೊಡಬೇಕಾಗಿರುವ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂಬುದನ್ನ ಮನವರಿಕೆ ಮಾಡಿಕೊಟ್ಟರು. ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡಿಬೇಕಾರುವ ಜಿವಿಕೆ ಇಎಂಆರ್ ಸಂಸ್ಥೆಯಿಂದ ಸಮಸ್ಯೆಗಳಾಗಿದ್ದರೆ, ಅದನ್ನ ಸಂಸ್ಥೆಯವರೊಂದಿಗೆ ಚರ್ಚಿಸಿ ಸರಿಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಅಗತ್ಯ ಸಹಕಾರ ದೊರೆಯಲಿದೆ ಎಂದು ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸ್ಪಷ್ಟಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 108 ಸಿಬ್ಬಂದಿಗಳು ಮುಷ್ಕರದಿಂದ ಹಿಂದೆ ಸರಿದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News