ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಬೆನ್ನಹಿಂದೆಯೇ ಮತ್ತೊಂದು ಚುನಾವಣಾ ಸಮರಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗಬೇಕಿದೆ. ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹೆಚ್ಚಾಗಲಿವೆ, ಅಲ್ಲದೆ, ಸುಮಾರು 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆ.


COMMERCIAL BREAK
SCROLL TO CONTINUE READING

ರಾಜ್ಯ ಚುನಾವಣಾ ಆಯೋಗ(Karnataka Election Commission) ಕ್ಷೇತ್ರ ಪುನರ್ ವಿಂಗಡಣೆ ಕುರಿತು ಮಾರ್ಗಸೂಚಿ ಹೊರಡಿಸಿದ್ದು, ಈ ಮಾರ್ಗಸೂಚಿ ಅನ್ವಯ ಕ್ಷೇತ್ರ ಪುನರ್ ವಿಂಗಡಣೆಯಾಗಲಿದೆ. ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು ಪುನರ್ ವಿಂಗಡಣೆಯ ಮಾಹಿತಿ ಹಾಗೂ ನಕ್ಷೆಗಳನ್ನು ಫೆ.19, 20 ಮತ್ತು 22ರಂದು ಆಯೋಗಕ್ಕೆ ಹಾಜರು ಪಡಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಪುನರ್​ ವಿಂಗಡಣೆಗೆ ಸಂಬಂಧಿಸಿದಂತೆ ಮಾತ್ರ ನಕ್ಷೆ ಹಾಗೂ ಮಾಹಿತಿ ಸಲ್ಲಿಕೆ ಆಗಬೇಕಿದೆ.


Aravind Limbavali: ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲಿಂಬಾವಳಿ..!


ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಕೈಗೆತ್ತಿಕೊಂಡಿದ್ದು, ಈ ಪ್ರಕ್ರಿಯೆ ಮೊದಲ ಹಂತ ಸೋಮವಾರ ಪೂರ್ಣಗೊಂಡಿದೆ. ಇದೇ ವಾರಾಂತ್ಯದಲ್ಲಿ 2ನೇ ಹಂತದ ಪರಿಶೀಲನೆ ಪೂರ್ಣಗೊಳಿಸಲು ನಿರ್ಧರಿಸಿದೆ. 2ನೇ ಹಂತದ ಪ್ರಕ್ರಿಯೆ ಕೂಡ ಇದೇ ವಾರದಲ್ಲಿ ಪೂರ್ಣಗೊಳಿಸಲು ಆಯೋಗ ಜಿಲ್ಲಾಧಿಕಾರಿ(District Commissioner)ಗಳಿಗೆ ಸೂಚಿಸಿದೆ. ಕ್ಷೇತ್ರದ ಮಾಹಿತಿ ಮತ್ತು ನಕ್ಷೆ ಪೂರ್ಣಗೊಂಡ ಬಳಿಕ ಅಧಿಸೂಚನೆ ಹೊರಡಿಸಲಾಗುತ್ತೆ.


Siddaramaiah: ನೂರು ಕ್ಷೇತ್ರಗಳಲ್ಲಿ 'ಕಾಂಗ್ರೆಸ್ ಸಮಾವೇಶ' ನಡೆಸಲು ಮಹತ್ವದ ಸಭೆ..!


ಯಾವುದು ಹೆಚ್ಚು? ಯಾವುದು ಕಡಿಮೆ?: ತಾಲೂಕು ಪಂಚಾಯಿತಿ ಕ್ಷೇತ್ರಗಳ ಜನಸಂಖ್ಯೆ ಪ್ರಮಾಣವನ್ನು 10 ಸಾವಿರದಿಂದ 12,500ಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ ಜಿಲ್ಲಾ ಪಂಚಾಯಿತಿ(Zilla Panchayat) ಕ್ಷೇತ್ರದ ಜನಸಂಖ್ಯೆ ಪ್ರಮಾಣವನ್ನು 40 ಸಾವಿರದಿಂದ 35 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದಾಗಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹೆಚ್ಚಾದರೆ, ಸುಮಾರು 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆ.


Basavaraj Horatti: ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ!


ಮೇ, ಜೂನ್​ ಅವಧಿ ಪೂರ್ಣ: ಕೇತ್ರ ಪುನರ್​ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ಮೇಲೆ ಮೀಸಲಾತಿ ಪ್ರಕಟಿಸಲಾಗುತ್ತದೆ. ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡ 45 ದಿನಗಳ ಬಳಿಕ ಚುನಾವಣೆ(Election) ದಿನಾಂಕ ಘೋಷಣೆಯಾಗಲಿದೆ. ಮೇ ಮತ್ತು ಜೂನ್​ ತಿಂಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅವಧಿ ಪೂರ್ಣಗೊಳ್ಳಲಿದ್ದು, ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ.


Madhu Bangarappa: 'ಮಧು ಬಂಗಾರಪ್ಪಗೆ ಕಾಂಗ್ರೆಸ್‌ಗೆ ಸ್ವಾಗತ : ಆದ್ರೆ ಮತ್ತೋರ್ವಗೆ ಅವಕಾಶವಿಲ್ಲ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.